ಬೆಂಗಳೂರು:ಮೈಸೂರು ರಸ್ತೆಯಲ್ಲಿರುವ ಫರ್ನಿಚರ್ ಅಂಗಡಿಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತಡರಾತ್ರಿ ಫರ್ನಿಚರ್ ಅಂಗಡಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂಪಾಯಿ ಫರ್ನಿಚರ್ ಸುಟ್ಟು ಭಸ್ಮ
ಮೈಸೂರು ರಸ್ತೆಯಲ್ಲಿರುವ ರಾಯಲ್ ಫರ್ನಿಚರ್ ಅಂಗಡಿಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಫರ್ನಿಚರ್ ಸುಟ್ಟು ಭಸ್ಮವಾಗಿದೆ.
ಅಗ್ನಿ ಅವಘಡ
ಮೈಸೂರು ರಸ್ತೆಯಲ್ಲಿರುವ ಅಲ್ತಾಫ್ ಪಾಷಾ ಎಂಬುವವರಿಗೆ ಸೇರಿದ ರಾಯಲ್ ಫರ್ನಿಚರ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಸಂಭವಿಸಿಲ್ಲ.
ಆದರೆ, ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ಫರ್ನಿಚರ್ ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.