ಯಲಹಂಕ :ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಗಳೂರು ಉತ್ತರ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿರುವಸೋಫಾ ತಯಾರಿಕಾ ಘಟಕವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ 10 ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಸೋಫಾ ತಯಾರಿಕ ಘಟಕಕ್ಕೆ ಬೆಂಕಿ ಓದಿ: ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ GSTಪರಿಹಾರ ನಷ್ಟದ ಬಾಕಿ ನೀಡುವಂತೆ ಕೇಂದ್ರಕ್ಕೆ ರಾಜ್ಯದ ಮನವಿ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಸಂಬಂಧಿ ವಿಜಯ್ ಕುಮಾರ್ ಎಂಬುವರಿಗೆ ಸೇರಿದ ಸೋಫಾ ತಯಾರಿಕಾ ಘಟಕವಿದು ಎನ್ನಲಾಗಿದೆ. ಘಟನೆಯಲ್ಲಿ ಸೋಫಾ ತಯಾರಿಕೆಗೆ ಬೇಕಾದ 10 ಕೋಟಿ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಆದರೆ, ಸೋಫಾ ತಯಾರಿಕ ಘಟಕ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.