ರವಿ ಡಿ. ಚೆನ್ನಣ್ಣನವರ್ ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ - ವಸಂತನಗರದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ
![ರವಿ ಡಿ. ಚೆನ್ನಣ್ಣನವರ್ ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ ರವಿ ಡಿ. ಚೆನ್ನಣ್ಣನವರ್ ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ](https://etvbharatimages.akamaized.net/etvbharat/prod-images/768-512-10079554-thumbnail-3x2-bng.jpg)
12:05 January 01
ಬೆಂಗಳೂರಿನ ವಸಂತನಗರದಲ್ಲಿರುವ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರು: ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಅಪಾರ್ಟ್ಮೆಂಟ್ನಲ್ಲಿ ನಿನ್ನೆ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ.
ವಸಂತನಗರದಲ್ಲಿರುವ ರವಿ ಡಿ. ಚೆನ್ನಣ್ಣನವರ್ ವಾಸವಿದ್ದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಅಪಾರ್ಟ್ಮೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಲಿಫ್ಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಂದನೇ ಪ್ಲೋರ್ನಿಂದ ನಾಲ್ಕನೇ ಪ್ಲೋರ್ವರೆಗೂ ಬೆಂಕಿ ಕಾಣಿಸಿಕೊಂಡಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Bangalore latest news