ಕರ್ನಾಟಕ

karnataka

ETV Bharat / state

ಸಿಇಟಿ 2023: ಮೊದಲ ದಿನ ಸುಸೂತ್ರ; ಇಂದು ಭೌತ, ರಸಾಯನ ಶಾಸ್ತ್ರ ಪರೀಕ್ಷೆ - First day of CET 2023

ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯಾವುದೇ ಗೊಂದಲವಿಲ್ಲದೇ ಸುಸೂತ್ರವಾಗಿ ಜರುಗಿತು.

Representative image
ಪ್ರಾತಿನಿಧಿಕ ಚಿತ್ರ

By

Published : May 21, 2023, 6:50 AM IST

ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2023) ಮೊದಲ ದಿನ ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಯಾವುದೇ ಅಡೆತಡೆ ಇಲ್ಲದೆ ಯಶಸ್ವಿಯಾಗಿ ನೆರವೇರಿದೆ. ಬೆಂಗಳೂರಿನ 121 ಕೇಂದ್ರಗಳು ಸೇರಿದಂತೆ ರಾಜ್ಯದ ಎಲ್ಲ 592 ಕೇಂದ್ರಗಳಲ್ಲಿ ಪರೀಕ್ಷೆ ಪಾರದರ್ಶಕವಾಗಿ ನಡೆದಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಜೀವಶಾಸ್ತ್ರ ಪರೀಕ್ಷೆಗೆ 2,00,457 (82.53%) ಹಾಗೂ ಗಣಿತ ಪರೀಕ್ಷೆಗೆ 2,39,716 (93.78%) ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ನೀಟ್ ವಿದ್ಯಾರ್ಥಿಗಳ ಮೇಲಿದ್ದ ಕಾಳಜಿ ಸಿಇಟಿ ವಿದ್ಯಾರ್ಥಿಗಳ ಮೇಲೆ ಏಕಿಲ್ಲ: ಕೈ ನಾಯಕರ ಕಾಲೆಳೆದ ಬಿಜೆಪಿ

ಬೆಂಗಳೂರಿನಲ್ಲಿ ಶನಿವಾರ ನೂತನ ಮುಖ್ಯಮಂತ್ರಿ ಹಾಗೂ ಇತರೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ಇದ್ದುದರಿಂದ ಕೆಇಎ ಮುನ್ನೆಚ್ಚೆರಿಕೆ ಕ್ರಮಗಳನ್ನು ತೆಗೆದುಕೊಂಡಿತ್ತು. ಮುಖ್ಯವಾಗಿ, ವಾಹನ ದಟ್ಟಣೆಯಲ್ಲಿ ಸಿಲುಕಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪುವುದು ತಡವಾಗಬಾರದೆಂದು ಕ್ರಮ ವಹಿಸಲಾಗಿತ್ತು. ಇದಕ್ಕಾಗಿ ಬೆಂಗಳೂರಿನ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವವರಿಗೆ ನಿಗದಿತ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಆಯಾ ಕೇಂದ್ರಕ್ಕೆ ಬರುವಂತೆ ಸೂಚಿಸಲಾಗಿತ್ತು. ಅಲ್ಲದೇ ವಿದ್ಯಾರ್ಥಿಗಳಿಗೆ ಕೇಂದ್ರವನ್ನು ತಲುಪಲು ಸಹಾಯ ಮಾಡುವಂತೆ ಪೊಲೀಸರ ಸಹಕಾರವನ್ನು ಕೋರಲಾಗಿತ್ತು. ಇಂದು (ಭಾನುವಾರ) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ನಿಗದಿಯಾಗಿರುವಂತೆ 2ನೇ ದಿನದ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ:ಸಿಎಂ ಪ್ರಮಾಣವಚನ ಹಿನ್ನೆಲೆ: ಬೆಳಗ್ಗೆ 8.30ಕ್ಕೆ ಆಗಮಿಸುವಂತೆ ಸಿಇಟಿ ವಿದ್ಯಾರ್ಥಿಗಳಿಗೆ ಮುನ್ಸೂಚನೆ..!

ಪರೀಕ್ಷೆಯ ಉದ್ದೇಶ: ವೃತ್ತಿ ಶಿಕ್ಷಣ ಕೋರ್ಸ್​ಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್, ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್​ಸಿ (ಕೃಷಿ), ಬಿಎಸ್​ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ), ಬಿಎಸ್ಸಿ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ ಮತ್ತು ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), ಮತ್ತು (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ವೇಳಾಪಟ್ಟಿ ಹೀಗಿದೆ..:

ಮೇ 20- ಜೀವಶಾಸ್ತ್ರ ಮತ್ತು ಗಣಿತ

ಮೇ 21- ರಸಾಯನಶಾಸ್ತ್ರ ಹಾಗೂ ಭೌತಶಾಸ್ತ್ರ

ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಸಿಇಟಿ ನಡೆಯಲಿದೆ.

ಇದನ್ನೂ ಓದಿ:ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ: ಪರೀಕ್ಷೆ ಬರೆಯಲಿರುವ 2.61 ಲಕ್ಷ ವಿದ್ಯಾರ್ಥಿಗಳು

ABOUT THE AUTHOR

...view details