ಬೆಂಗಳೂರು:ನಗರದ ಯಶವಂತಪುರದ ಆರ್ಟಿಒ ಕಚೇರಿ ಆವರಣದಲ್ಲಿ ಪೌರಕಾರ್ಮಿಕರಿಗಾಗಿ ಸುವಿಧಾ ಕ್ಯಾಬಿನ್ ಉದ್ಘಾಟನೆಗೊಂಡಿದೆ. ಡಿಸಿಎಂ ಅಶ್ವತ್ಥ್ ನಾರಾಯಣ್, ಮೇಯರ್ ಗೌತಮ್ ಕುಮಾರ್, ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಉದ್ಘಾಟನೆಗೊಳಿಸಿದರು.
ಪೌರಕಾರ್ಮಿಕರಿಗೆ ಕೆಲಸದ ಅವಧಿಯಲ್ಲಿ ಅನುಕೂಲವಾಗಲು ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ, ಬಟ್ಟೆ ಬದಲಾಯಿಸುವ ಕೊಠಡಿ, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಮೊಬೈಲ್ ಚಾರ್ಜಿಂಗ್ ಸೇರಿದಂತೆ ಹಲವು ಸೌಲಭ್ಯ ಮಾಡಲಾಗಿದೆ.