ಬೆಂಗಳೂರು:ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 5 ಕೋಟಿ ರೂ. ಬೆಳ್ಳಿ ಗೆಲ್ಲುವವರಿಗೆ 3 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದವರಿಗೆ 2 ಕೋಟಿ ರೂ. ನೀಡಿ ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಪ್ರೋತ್ಸಾಹಧನನ ಚೆಕ್ ವಿತರಿಸಿದರು. ಅದಿತಿ ಅಶೋಕ್, ಪೌವಾದ್ ಮಿರ್ಜಾ ಇವರುಗಳಿಗೆ ಅವರ ಪರವಾಗಿ ಅವರ ಪಾಲಕರಿಗೆ ತಲಾ 10 ಲಕ್ಷ ರೂ. ಚೆಕ್ ಅನ್ನು ಸಿಎಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಹಸ್ತಾಂತರಿಸಿ ಶುಭ ಕೋರಿದರು.
ಇದೇ ವೇಳೆ ಭಾರತ ತಂಡದ ಜೆರ್ಸಿಯನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು. ಬಳಿಕ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಸೆಲ್ಫಿ ಫ್ರೇಮ್ನಲ್ಲಿ ನಿಂತು ಸಿಎಂ ಹಾಗೂ ಸಚಿವರು ಚಿಯರಪ್ ಮಾಡಿದರು.
ನಂತರ ಮಾತನಾಡಿದ ಸಿಎಂ ಯಡಿಯೂರಪ್ಪ, ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗುತ್ತಿದ್ದಂತೆ ಕರ್ನಾಟಕದ ಹೆಮ್ಮೆಯ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಘೋಷಣೆ ಮಾಡಿದ್ದೆ. ಅದರಂತೆ ಇಂದು ತಲಾ 10 ಲಕ್ಷ ರೂ. ನೀಡಲಾಗುತ್ತಿದೆ. ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಸದಾ ಬೆಂಬಲ ನೀಡಲಿದೆ. ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವುದು ಹೆಮ್ಮೆಯ ವಿಚಾರ. ಅಲ್ಲಿ ಗೆದ್ದು ಬಂದರೆ ರಾಜ್ಯ ಮಾತ್ರವಲ್ಲ ಇಡೀ ದೇಶಕ್ಕೆ ಕೀರ್ತಿ ಬರಲಿದೆ ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮಾತನಾಡಿ, ಈಜು ಸ್ಪರ್ಧೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಭಾಗವಹಿಸುತ್ತಿದೆ. ಮೂವರು ಕ್ರೀಡಾಪಟುಗಳು ಆಯ್ಕೆಯಾಗಿದ್ದು, ಅವರಲ್ಲಿ ಓರ್ವ ಕ್ರೀಡಾಪಟು ಕರ್ನಾಟಕದವರು ಎನ್ನುವುದು ನಮಗೆ ಹೆಮ್ಮೆ. ಒಲಿಂಪಿಕ್ಸ್ಗೆ ಆಯ್ಕೆಯಾಗಿರುವ ಮೂವರೂ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದರು.
ಕ್ರೀಡಾಪಟುಗಳ ಸಾಧನೆ ಹಿನ್ನೋಟ: