ಕರ್ನಾಟಕ

karnataka

ETV Bharat / state

ವ್ಯಾಪಾರ ಪರವಾನಗಿ, ಖಾತಾ ಶುಲ್ಕ ಹೆಚ್ಚಳಕ್ಕೆ ಎಫ್​​​ಕೆಸಿಸಿಐ ಅಸಮಾಧಾನ

ವ್ಯಾಪಾರ ಪರವಾನಗಿ ಶುಲ್ಕ ಮತ್ತು ಖಾತಾ ಶುಲ್ಕ ಏರಿಕೆ ನಿರ್ಧಾರದಿಂದ ವ್ಯಾಪಾರಿಗಳಿಗೆ ತೊಂದರೆಯಾಗಲಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಅಧ್ಯಕ್ಷ ಸಿ.ಆರ್. ಜನಾರ್ದನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

By

Published : Aug 21, 2020, 1:35 PM IST

Fkcci
Fkcci

ಬೆಂಗಳೂರು: ಕೊರೊನಾ ಸೋಂಕಿನಿಂದ ವಾಣಿಜ್ಯ ವ್ಯಾಪಾರವು ಕುಂಠಿತವಾಗಿದ್ದು, ಈ ಸಂದರ್ಭದಲ್ಲಿ ವ್ಯಾಪಾರ ಪರವಾನಗಿ ಶುಲ್ಕ ಮತ್ತು ಖಾತಾ ಶುಲ್ಕ ಏರಿಕೆ ನಿರ್ಧಾರದಿಂದ ವ್ಯಾಪಾರಿಗಳಿಗೆ ತೊಂದರೆಯಾಗಲಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಸಿ.ಆರ್. ಜನಾರ್ದನ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸೋಂಕಿನಿಂದ ಸಾವಿರಾರು ಅಂಗಡಿಗಳು ಮುಚ್ಚಲ್ಪಟ್ಟಿವೆ. ಇಂತಹ ಸಂದರ್ಭದಲ್ಲಿ ಪರವಾನಗಿ ಶುಲ್ಕ, ಖಾತಾ ಶುಲ್ಕ ಮತ್ತು ಅಭಿವೃದ್ಧಿ ಶುಲ್ಕ ಸೇರಿದಂತೆ ಇನ್ನಿತರ ಶುಲ್ಕಗಳನ್ನ ಏರಿಕೆ ಮಾಡಲಾಗಿದೆ. ಸಂಪನ್ಮೂಲಗಳ ಕ್ರೋಢೀಕರಣಕ್ಕೆ ಬಿಬಿಎಂಪಿಗೆ ಸಾಕಷ್ಟು ಅವಕಾಶಗಳಿವೆ. ಅಕ್ರಮ ಸಕ್ರಮದಲ್ಲಿ ಸಾಕಷ್ಟು ಪ್ರಮಾಣದ ಆದಾಯ ಪಡೆದುಕೊಳ್ಳಬಹುದಾಗಿದೆ. ಆದರೆ, ಶುಲ್ಕ ಏರಿಕೆ ಮಾಡಿರುವುದರಿಂದ ವ್ಯಾಪಾರಿ ಮತ್ತು ಉದ್ಯಮಿಗಳಿಗೆ ಕಿರುಕುಳ ಉಂಟಾಗಲಿದೆ. ಈ ಬಗ್ಗೆ ಬಿಬಿಎಂಪಿ ಸರ್ಕಾರದೊಂದಿಗೆ ಚರ್ಚಿಸುವಂತೆ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details