ಕರ್ನಾಟಕ

karnataka

ETV Bharat / state

ರಾಜಧಾನಿಯಲ್ಲಿ ಮುಂದುವರೆದ ಫ್ಲೆಕ್ಸ್, ಅನಧಿಕೃತ ಜಾಹೀರಾತು ಫಲಕ: ನ್ಯಾಯಾಂಗ ನಿಂದನೆ ಅರ್ಜಿ ದಾಖಲು - ರಾಜಧಾನಿಯಲ್ಲಿ ಮುಂದುವರೆದ ಫ್ಲೆಕ್ಸ್

ಅನುಮತಿ ಪಡೆಯದೇ ವಿಧಾನಸೌಧ ಆವರಣ ಸರಿದಂತೆ ನಗರದ ವಿವಿಧ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್, ಪೋಸ್ಟರ್‌ಗಳನ್ನು ಅಳವಡಿಸಲಾಗುತ್ತಿದೆ. ಇದನ್ನು ಪ್ರಶ್ನಿಸಿ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.

high court
ಹೈಕೋರ್ಟ್‌

By

Published : Nov 14, 2022, 7:49 PM IST

ಬೆಂಗಳೂರು:ನ್ಯಾಯಾಲಯದ ಆದೇಶ ಹೊರತುಪಡಿಸಿ ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ಮುಂದುವರೆದಿರುವುದರಿಂದ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಎಂಬುವರು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಆಡಳಿತಾಧಿಕಾರಿಯೂ ಆದ ನಗರಾಭಿವೃದ್ಧಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ಪ್ರತಿವಾದಿಳನ್ನಾಗಿ ಮಾಡಲಾಗಿದೆ.

ಜಾಹೀರಾತು ಫಲಕ ಅಳವಡಿಸಬೇಕಾದರೆ ಸ್ಥಳೀಯ ಸಂಸ್ಥೆಯ ಸಕ್ಷಮ ಅಧಿಕಾರಿಯಿಂದ ಲಿಖಿತ ಅನುಮತಿ ಪಡೆಯಬೇಕು. ಆದರೆ, ಅನುಮತಿ ಪಡೆಯದೇ ವಿಧಾನಸೌಧ ಆವರಣ ಸರಿದಂತೆ ನಗರದ ವಿವಿಧ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್, ಪೋಸ್ಟರ್‌ಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ನಗರದ ಸಾರ್ವಜನಿಕರಿಗೆ ತೀವ್ರತರದ ತೊಂದರೆ ಉಂಟಾಗುತ್ತಿದೆ. ಜತೆಗೆ, ನಗರದ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಹೈಕೋರ್ಟ್​ನಿಂದ ಆದೇಶ: ಫ್ಲೆಕ್ಸ್ ಬ್ಯಾನರ್ ಅಳವಡಿಕೆ ಕುರಿತಂತೆ ಈ ಹಿಂದೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಯನ್ನು ತಡೆಯಬೇಕು ಎಂದು ಸರ್ಕಾರ, ಬಿಬಿಎಂಪಿ ಮತ್ತು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿತ್ತು. ಅಲ್ಲದೆ, ನಗರದಲ್ಲಿ ಅಳವಡಿಸಿರುವ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಅನಧಿಕೃತವಾಗಿ ಅಳವಡಿಕೆ ಮಾಡಿದವರ ವಿರುದ್ಧ ಕಾನೂನು ಕ್ರಮಜರುಗಿಸಬೇಕು ಎಂಬುದು ಸೇರಿದಂತೆ ಇದೇ ವಿಚಾರವಾಗಿ 2012ರಿಂದಲೂ ಹೈಕೋರ್ಟ್ ಕಾಲಕಾಲಕ್ಕೆ ಅನೇಕ ಆದೇಶ ಹೊರಡಿಸಿದೆ.

ಈ ಆದೇಶವನ್ನು ಪ್ರತಿವಾದಿಗಳಾಗಿರುವ ಅಧಿಕಾರಿಗಳು ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಉದ್ದೇಶಪೂರ್ವಕವಾಗಿಯೇ ಉಲ್ಲಂಘನೆ ಮಾಡಿದ್ದಾರೆ. ಇದರಿಂದ ನಗರದಲ್ಲಿ ಅನಧಿಕೃತ ಜಾಹೀರಾತುಗಳ ಅಳವಡಿಕೆ ಹೆಚ್ಚಿದೆ. ಅದರಲ್ಲೂ ರಾಜಕಾರಣಿಗಳ ಫೋಟೋಗಳನ್ನು ಎಲ್ಲೆಂದರಲ್ಲಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಪಕ್ಷಿಧಾಮಗಳಲ್ಲಿ ರಸ್ತೆ ಅಭಿವೃದ್ಧಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಅಲ್ಲದೆ, ಅನಧಿಕೃತ ಜಾಹೀರಾತು ಅಳವಡಿಕೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣದ ದಾಖಲಿಸಲು ಮತ್ತು ದಂಡ ವಸೂಲಿ ಮಾಡಲು ಅವಕಾಶವಿದೆ. ಆದರೆ, ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಕೆಲವರು ನ್ಯಾಯಾಲಯದ ಆದೇಶ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಅರ್ಜಿಯಲ್ಲಿನ ಇತರೆ ಪ್ರತಿವಾದಿಗಳ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

ABOUT THE AUTHOR

...view details