ಬೆಂಗಳೂರು :ನೆರೆಹಾನಿ ಸಂತ್ರಸ್ತರಿಗೆ ಯಡಿಯೂರಪ್ಪ ಸರ್ಕಾರದಲ್ಲಿ ನೀಡುತ್ತಿದ್ದ ಮಾದರಿಯಲ್ಲಿಯೇ ಪರಿಹಾರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಹಾನಿ ಸಮೀಕ್ಷೆಗೆ ಕೇಂದ್ರ ತಂಡ ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಸರ್ಕಾರದಿಂದ ನೆರೆ ಪರಿಹಾರ ಕಾರ್ಯ ಮಾಡುವ ಸಂಬಂಧ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿ ಐಎನ್ಎಸ್ ಪ್ರಸಾದ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದು, ನೆರೆ ಪರಿಹಾರ ಕಾರ್ಯಗಳಿಗೆ ಹಾಗೂ ಸಂತ್ರಸ್ತರಿಗೆ ನೆರವು ನೀಡಲು ಅಗತ್ಯ ಹಣಕಾಸು ಒದಗಿಸುವ ಸಂಬಂಧ ಚರ್ಚೆ ನಡೆಸಲಾಗಿದೆ.
ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಮಳೆಯಿಂದಾಗಿ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದೆ. 13 ಜನ ಸಾವನ್ನಪ್ಪಿದ್ದಾರೆ, ಒಬ್ಬರು ನಾಪತ್ತೆಯಾಗಿದ್ದಾರೆ. ರಸ್ತೆಗಳು, ಸೇತುವೆಗಳು ಹಾಳಾಗಿವೆ. ಕೂಡಲೇ ಸರಿಪಡಿಸಲು ಸೂಚನೆ ನೀಡಲಾಗಿದೆ. ಅದಕ್ಕಾಗಿ 510 ಕೋಟಿ ರೂ. ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. 150 ಕೋಟಿ ರೂಪಾಯಿ ಎನ್ಡಿಆರ್ಎಫ್ ಅನುದಾನದಲ್ಲಿ ಬಳಕೆ ಹಾಗೂ 700 ಕೋಟಿಗೂ ಹೆಚ್ಚು ಹಣ ಡಿಸಿಗಳ ಬಳಿ ಇದೆ ಎಂದಿದ್ದಾರೆ.
ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ: