ಬೆಂಗಳೂರು: ನೆರೆ ಹಾವಳಿಗೊಳಗಾದ ರಸ್ತೆ, ಸೇತುವೆ ಕಾಮಗಾರಿಗಳನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಜನವರಿ ಅಂತ್ಯಕ್ಕೆ ನೆರೆ ಕಾಮಗಾರಿ ಪೂರ್ಣ: ಡಿಸಿಎಂ ಕಾರಜೋಳ - ಕರ್ನಾಟಕ ನೆರೆ ಹಾವಳಿ ಕಾಮಗಾರಿ
ನೆರೆ ಹಾವಳಿಗೊಳಗಾದ ರಸ್ತೆ, ಸೇತುವೆ ಕಾಮಗಾರಿಗಳನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆ ಹಾನಿಯಾಗಿರುವ 1,816 ರಸ್ತೆ ಕಾಮಗಾರಿಗಳ ಪೈಕಿ 733 ಕಾಮಗಾರಿ ಪೂರ್ಣಗೊಳಿಸಲಾಗಿದೆ. 247 ಸೇತುವೆಗಳು ಸಂಪೂರ್ಣ ಹಾನಿಯಾಗಿದ್ದು, ಅವುಗಳಲ್ಲಿ 140 ಕಾಮಗಾರಿ ಪೂರ್ಣವಾಗಿದೆ. ಬಾಕಿ ಕಾಮಗಾರಿಗಳನ್ನು ಜನವರಿ ಅಂತ್ಯಕ್ಕೆ ಮುಗಿಸಲು ತಿಳಿಸಿದೆ. ಜಿಲ್ಲಾ ಹೆದ್ದಾರಿಗಳ ಗುಂಡಿ ಮುಚ್ಚಲು 691 ಕೋಟಿ ಅನುದಾನ ನೀಡಲಾಗಿದೆ ಎಂದರು.
2018-19ರ ನೆರೆ ಹಾವಳಿ ಕಾಮಗಾರಿಗೆ 9 ಸಾವಿರ ಕೋಟಿ ಅನುದಾನವಿದೆ. ಅದರಲ್ಲಿ ಈಗಾಗಲೇ ಸುಮಾರು 3 ಸಾವಿರ ಕೋಟಿ ವೆಚ್ಚವಾಗಿದೆ. ಶೇಕಡಾ 60ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.