ಬೆಂಗಳೂರು:ನಗರದಲ್ಲಿ ಕೋವಿಡ್ ಸೋಂಕು ಕ್ರಮೇಣ ಏರಿಕೆಯಾಗುತ್ತಿದ್ದು, ಅದನ್ನು ನಿಯಂತ್ರಣದಲ್ಲಿಡಬೇಕಾದರೆ ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಆದ್ದರಿಂದ ನಗರದ ಎಲ್ಲ ಹೋಟೆಲ್‌ಗಳಲ್ಲಿ ಕೋವಿಡ್ ನಿಯಮಗಳನ್ನು ಸರಿಯಾಗಿ ಪಾಲಿಸುವ ಮೂಲಕ ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಹಕರಿಸಬೇಕೆಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೋಟಲ್ ಉದ್ದಿಮೆದಾರರಲ್ಲಿ ಮನವಿ ಮಾಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೋಟೆಲ್ ಅಸೋಸಿಯೇಷನ್ ಪದಾಧಿಕಾರಿಗಳ ಜೊತೆ ಜೂಮ್ ಮೂಲಕ ವರ್ಚುಯಲ್ ಸಭೆ ನಡೆಸಿದರು.. ಈ ಸಭೆಯಲ್ಲಿ ಮುಖ್ಯ ಆಯುಕ್ತರು ಪಾಲ್ಗೊಂಡು ಕೋವಿಡ್ ಸೋಂಕು ಹಿನ್ನೆಲೆ ವ್ಯಾಪಾರ - ವಹಿವಾಟುಗಳ ಮೇಲೆ ತುಂಬಾ ಪರಿಣಾಮ ಬೀರಿದೆ. ಕೋವಿಡ್ ಸೋಂಕು ಉಲ್ಬಣಗೊಳ್ಳುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ ಸೋಂಕು ನಿಯಮಗಳನ್ನು ಪಾಲಿಸದ ಹೋಟೆಲ್‌ಗಳಿಗೆ ಪಾಲಿಕೆ ಆರೋಗ್ಯಾಧಿಕಾರಿಗಳು, ಮಾರ್ಷಲ್‌ಗಳು ಭೇಟಿ ನೀಡಿ ದಂಡವನ್ನು ಹಾಗೂ ನಿಯಮ ಪಾಲಿಸದ ಉದ್ದಿಮೆಗಳನ್ನು ಮುಚ್ಚಲಾಗುತ್ತಿರುವುದು ಗಮನಿಸಲಾಗಿದೆ.
ನಗರದಲ್ಲಿ ಕೋವಿಡ್ ಸೊಂಕು ನಿಯಂತ್ರಣದಲ್ಲಿರಬೇಕಾದರೆ ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ಇನ್ನೂ ಹೆಚ್ಚು ಪ್ರಕರಣಗಳು ಕಂಡುಬರಲಿವೆ. ಆ ಕಾರಣಕ್ಕಾಗಿಯೇ ಕೋವಿಡ್ ನಿಯಮಗಳನ್ನು ಪಾಲಿಸದ ಉದ್ದಿಮೆಗಳನ್ನು ಮುಚ್ಚಲಾಗುತ್ತಿದೆ. ನಗರದಲ್ಲಿ ನಿತ್ಯ ಸುಮಾರ 6,000 ಕೋವಿಡ್ ಪ್ರಕರಣಗಳು ಕಂಡುಬರುತ್ತಿದೆ. ಪಾಲಿಕೆ ನಾಗರಿಕರ ಜೊತೆ ಸೇರಿಕೊಂಡು ವ್ಯಾಕ್ಸಿನೇಷನ್, ಟೆಸ್ಟಿಂಗ್, ಕ್ವಾರಂಟೈನ್ ಸರಿಯಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಎಲ್ಲರೂ ಸಹಕರಿಸಿದಾಗ ಮಾತ್ರ ಕೋವಿಡ್ ನಿಯಂತ್ರಣಕ್ಕೆ ಬಂದು ಮೊದಲಿನಂತೆ ವ್ಯಾಪಾರ - ವಹಿವಾಟು ನಡೆಸಲು ಸಾಧ್ಯವಾಗುತ್ತದೆ. ಮುಂಬರುವ ದಿನಗಳಲ್ಲಿ ಸಮಸ್ಯೆ ನಿವಾರಣೆ ದೃಷ್ಡಿಯಿಂದ ಪಾಲಿಕೆ ವತಿಯಿಂದ ಮುಂಜಾಗೃತ ಕ್ರಮ ವಹಿಸುತ್ತಿದ್ದೇವೆ. ಅದೇ ರೀತಿ ತಮ್ಮ ಉದ್ದಿಮೆ - ಹೋಟೆಲ್‌ಗಳಲ್ಲಿಯೂ ಮುಂಜಾಗ್ರತಾ ಕ್ರಮ ವಹಿಸಿ ಲೋಪದೋಷಗಳನ್ನು ತಿದ್ದಿಕೊಳ್ಳುವಂತೆ ತಿಳಿಸಿದರು.
ಅಲ್ಲದೆ ತಮ್ಮ ಎಲ್ಲ ಸಿಬ್ಬಂದಿಗಳು ಕೋವಿಡ್ ಟೆಸ್ಟ್ ಮತ್ತು ವ್ಯಾಕ್ಸಿನೇಷನ್ ಅನ್ನು ಹಾಕಿಸಿಕೊಳ್ಳುವಂತೆ ಸೂಚಿಸಿ, ಈ ಸಂಬಂಧ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯದ ಜಂಟಿ ಆಯುಕ್ತರು-ಆರೋಗ್ಯಾಧಿಕಾರಿಗಳು ಸಹಕರಿಸಲಿದ್ದಾರೆ ಎಂದು ಸೂಚಿಸಿದರು.