ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಪ್ರಕೃತಿ ವಿಕೋಪ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ 86.25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಕೇಂದ್ರೀಯ ಗೃಹ ಮಂತ್ರಾಲಯವು ಮಾರ್ಗಸೂಚಿ/ಆದೇಶಗಳನ್ನು ಹೊರಡಿಸಿದೆ. ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ/ಆದೇಶಗಳನುಸಾರ ಕರ್ನಾಟಕ ರಾಜ್ಯ ಸರ್ಕಾರವು ಈ ಆದೇಶ ಹೊರಡಿಸಿದೆ. ಇದು ಏ.23 ರಿಂದ ಈ ಆದೇಶ ಜಾರಿಗೆ ಬಂದಿದೆ.
ಅನುದಾನದ ಅವಶ್ಯಕತೆಯ ಮಾಹಿತಿಯನ್ನು ಗೂಗಲ್ ಸ್ಪ್ರೆಡ್ ಶೀಟ್ ಮೂಲಕ ನಮೂದಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಒಟ್ಟು 86.25 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೋರಿ ವಿವರಗಳನ್ನು ಸಲ್ಲಿಸಿದ್ದರು. ಸದರಿ ವಿವರಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮೊತ್ತವನ್ನು ಬಿಡುಗಡೆ ಮಾಡಲು ಸರ್ಕಾರವು ನಿರ್ಧರಿಸಿ ಆದೇಶ ಹೊರಡಿಸಿದೆ. 86.25 ಕೋಟಿ ರೂಪಾಯಿ ಬಿಡುಗಡೆ ಮಾಡಿರುವ ಸರ್ಕಾರ ಇದಕ್ಕೆ ಕೆಲ ಷರತ್ತುಗಳನ್ನು ಕೂಡ ವಿಧಿಸಿದ್ದು ಕೆಳಗಿನಂತಿವೆ.