ಆನೇಕಲ್: ಅರಣ್ಯ ಕಾವಲುಗಾರಿಗೆ 5 ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಡನ್ನು ರಕ್ಷಿಸಿ ಎಂದು ಹೇಳುವ ಅರಣ್ಯ ಇಲಾಖೆ ಅರಣ್ಯ ರಕ್ಷಕರ ಸಮಸ್ಯೆ ಬಗೆಹರಿಸುವಲ್ಲಿ ಜಾಣ ಕಿವುಡಾಗಿದೆ. ಸಂಬಳದ ಜತೆ ಪಿಎಫ್ ಕೂಡಾ ಸರಿಯಾಗಿ ನೀಡಿಲ್ಲ ಎಂದು ಸಿಬ್ಬಂದಿ ದೂರುತ್ತಿದ್ದಾರೆ.

ಇವರೆಲ್ಲ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಫಾರೆಸ್ಟ್ ವಾಚರ್ಸ್ (ಅರಣ್ಯ ಕಾವಲುಗಾರರು) ಆಗಿ ಸುಮಾರು 250 ಸಿಬ್ಬಂದಿಗೆ ಕಳೆದ 5 ತಿಂಗಳಿಂದ ಸಂಬಳ ಸಹ ನೀಡದೆ ಅರಣ್ಯ ಇಲಾಖೆ ಕೆಲಸ ಮಾಡಿಸಿಕೊಳ್ಳುತ್ತಿದೆ. ಅಧಿಕಾರಿಗಳನ್ನು ಪ್ರಶ್ನಿಸಿದರೆ ಗುತ್ತಿಗೆದಾರರನ್ನು ಕೇಳಿ ಎಂದು ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ಸಿಬ್ಬಂದಿ ಆರೋಪಿಸಿದರು.
ಗುತ್ತಿಗೆದಾರರ ಹಾಗೂ ಅರಣ್ಯ ಅಧಿಕಾರಿಗಳ ಜಗಳದಲ್ಲಿ ಅಮಾಯಕ ಕಾರ್ಮಿಕರು ಬಲಿಯಾಗುತ್ತಿದ್ದಾರೆ.ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಿಬ್ಬಂದಿ ಆಗ್ರಹಿಸಿದ್ದಾರೆ.