ಕರ್ನಾಟಕ

karnataka

ETV Bharat / state

ಹುಲಿ ಉಗುರು ಪೆಂಡೆಂಟ್ ಹೊಂದಿರುವ ಆರೋಪ: ದರ್ಶನ್, ರಾಕ್​ಲೈನ್ ವೆಂಕಟೇಶ್‌ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ - ಬಿಗ್ ಬಾಸ್ ರಿಯಾಲಿಟಿ ಶೋ

ನಟ ದರ್ಶನ್, ರಾಕ್​ಲೈನ್ ವೆಂಕಟೇಶ್​, ಜಗ್ಗೇಶ್​ ಮತ್ತು ಜೆಡಿಎಸ್​ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರ ಮನೆಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರತ್ಯೇಕವಾಗಿ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು
ಬೆಂಗಳೂರು

By ETV Bharat Karnataka Team

Published : Oct 25, 2023, 8:17 PM IST

Updated : Oct 25, 2023, 10:05 PM IST

ದರ್ಶನ್, ರಾಕ್​ಲೈನ್ ವೆಂಕಟೇಶ್‌ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಶೋಧ

ಬೆಂಗಳೂರು:ಹುಲಿ ಉಗುರಿನ ಮಾದರಿ ಪೆಂಡೆಂಟ್‌ ಧರಿಸಿದ ಕೆಲವರ ಫೋಟೋಗಳು ವೈರಲ್​ ಆದ ಬಳಿಕ ಕೇಳಿ ಬಂದ ದೂರು ಹಿನ್ನೆಲೆಯಲ್ಲಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ನಟ ದರ್ಶನ್ ತೂಗುದೀಪ ಸೇರಿದಂತೆ ನಾಲ್ವರ ಮನೆಗಳ ಮೇಲೆ ಶೋಧ ವಾರೆಂಟ್ ಪಡೆದು ಪರಿಶೀಲನೆ ನಡೆಸಿದರು. ನಟರಾದ ಜಗ್ಗೇಶ್, ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಇಲಾಖೆಯ ನಾಲ್ಕು ತಂಡಗಳು ಪ್ರತ್ಯೇಕವಾಗಿ ತೆರಳಿದ್ದು, ನೊಟೀಸ್ ನೀಡಿ, ಮನೆ ಶೋಧಿಸಿವೆ.

ಆರ್.ಆರ್.ನಗರದಲ್ಲಿರುವ ದರ್ಶನ್ ಮನೆಗೆ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡ ತೆರಳಿ ಪರಿಶೀಲಿಸಿತು. ಈ ವೇಳೆ ದರ್ಶನ್ ಇರಲಿಲ್ಲ. ಅದೇ ರೀತಿ ಮಹಾಲಕ್ಷ್ಮೀ ಲೇಔಟ್​ನಲ್ಲಿರುವ ರಾಕ್​ಲೈನ್ ವೆಂಕಟೇಶ್, ಜೆ.ಪಿ.ನಗರದಲ್ಲಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಮಲ್ಲೇಶ್ವರದಲ್ಲಿರುವ ಜಗ್ಗೇಶ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ನೋಟಿಸ್ ಜಾರಿ ಮಾಡಿದ್ದಾರೆ. ಪರಿಶೀಲನೆ ಕಾರ್ಯ ಮುಂದುವರೆಸುತ್ತಿರುವ ಅಧಿಕಾರಿಗಳು ಹುಲಿಯ ಉಗುರಿನ ಪೆಂಡೆಂಟ್ ಸಿಕ್ಕರೆ ಕಾನೂನಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ನೊಟೀಸ್ ವಿವರ: ಸಾಮಾಜಿಕ ಜಾಲತಾಣ ಹಾಗೂ ನಿರ್ದಿಷ್ಟವಾಗಿ ಕೆಲವು ಸಂಘ ಸಂಸ್ಥೆಗಳು ಹುಲಿಯ ಉಗುರಿನ ಪೆಂಡೆಂಟ್​ ಧರಿಸಿರುವ ತಮ್ಮ ಛಾಯಾಚಿತ್ರಗಳೊಂದಿಗೆ ತಮ್ಮ ವಿರುದ್ಧ ದೂರು ದಾಖಲಿಸಿವೆ. ವನ್ಯಜೀವಿಗಳ ಅಂಗಾಂಗಗಳನ್ನು ಹೊಂದುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಕಲಂ 9, 39,40,42,44, 48ಎ, 49ಎ, 49ಬಿ, 51,52 ಹಾಗೂ 58 ರ ಪ್ರಕಾರ ಅಪರಾಧ. ಈ ನೊಟೀಸ್ ತಲುಪಿದ ತಕ್ಷಣ ತಮ್ಮ ಸ್ವಾಧೀನದಲ್ಲಿರುವ ವನ್ಯಜೀವಿ ಅಂಗ ಎಂದು ಹೇಳಲಾದ ವಸ್ತುವನ್ನು ತಪಾಸಣೆಗೆ ಒಳಪಡಿಸಲು ಈ ಮೂಲಕ ತಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ, ನಿಮ್ಮ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಕ್‌ಲೈನ್ ವೆಂಕಟೇಶ್ ಅವರಿ​ಗೆ ನೀಡಿದ ನೊಟೀಸ್‌ನಲ್ಲಿ ತಿಳಿಸಲಾಗಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಹೇಳುವುದೇನು?: ಅಳಿವಂಚಿನಲ್ಲಿರುವ ಕಾಡು ಪ್ರಾಣಿ ಬೇಟೆಯಾಡುವುದು, ಸೆರೆಹಿಡಿಯುವುದು, ಮಾರಾಟ ಮಾಡುವುದು, ಪ್ರಾಣಿಗಳನ್ನು ಕೊಂದು ಅದರ ಉಗುರು, ದಂತ, ಕೊಂಬು ಸೇರಿದಂತೆ ಇನ್ನಿತರ ಪಳೆಯುಳಿಕೆಗಳನ್ನು ಇರಿಸಿಕೊಳ್ಳುವುದು ಕಾನೂನುಬಾಹಿರ. ಕಾನೂನು ಉಲ್ಲಂಘಿಸಿರುವುದು ಸಾಬೀತಾದರೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 3 ರಿಂದ 7 ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಿದೆ.

ಇದನ್ನೂ ಓದಿ:ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ : ನಟ ದರ್ಶನ್, ಜಗ್ಗೇಶ್ ಸೇರಿ ಹಲವರ ವಿರುದ್ಧ ದೂರು..

Last Updated : Oct 25, 2023, 10:05 PM IST

ABOUT THE AUTHOR

...view details