ಕರ್ನಾಟಕ

karnataka

ETV Bharat / state

2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ.. ಜಿ. ಪರಮೇಶ್ವರ್ ಅಧ್ಯಕ್ಷ - Etv bharat kannada

ವಿಧಾನಸಭೆ ಚುನಾವಣೆಗೆ ಸಜ್ಜಾದ ಕಾಂಗ್ರೆಸ್​- ಪ್ರಣಾಳಿಕೆ ಸಮಿತಿ ರಚನೆ- ಮಾಜಿ ಡಿಸಿಎಂ ಜಿ. ಪರಮೇಶ್ವರ್​ಗೆ ಅಧ್ಯಕ್ಷ ಸ್ಥಾನ

2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ
2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ

By

Published : Aug 1, 2022, 5:11 PM IST

ಬೆಂಗಳೂರು: 2023 ರಲ್ಲಿ ಕರ್ನಾಟಕದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಪ್ರಣಾಳಿಕ ಸಮಿತಿ ರಚನೆ ಮಾಡಲಾಗಿದ್ದು, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅಧ್ಯಕ್ಷರಾಗಿ ನಿಯೋಜಿತರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಇಂದು ಈ ಆದೇಶ ಹೊರಡಿಸಿದ್ದು, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ನೇತೃತ್ವದ ಸಮಿತಿ ರಚನೆಯಾಗಿದೆ. ಉಪಾಧ್ಯಕ್ಷರಾಗಿ ಮಧು ಬಂಗಾರಪ್ಪ ಮತ್ತು ಪ್ರೋ ಕೆ.ಇ. ರಾಧಾಕೃಷ್ಣ ಆಯ್ಕೆಯಾಗಿದ್ದಾರೆ.

ಈ ನಾಯಕರು ಮುಂಬರುವ ದಿನಗಳಲ್ಲಿ ರಾಜ್ಯದ ವಿವಿಧ ಹಂತದ ಕಾಂಗ್ರೆಸ್ ನಾಯಕರು, ಮುಖಂಡರು, ಮಾಜಿ ಸಚಿವರು ಮಾಜಿ ಶಾಸಕರು, ಶಾಸಕರು, ವಿವಿಧ ಹಂತದ ಮುಖಂಡರು ಹಾಗೂ ಕಾರ್ಯಕರ್ತರನ್ನು ಸಂಪರ್ಕಿಸಿ ಸಮಾಲೋಚಿಸಿ ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ,ಪರಮೇಶ್ವರ್ ಅಧ್ಯಕ್ಷ

2023 ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿಯನ್ನು ಎಐಸಿಸಿ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರಿಗೆ ನೀಡಿದ್ದು, ಅತ್ಯಂತ ಪ್ರಭಾವಶಾಲಿ ಹಾಗೂ ಜನರನ್ನು ಸೆಳೆಯುವ ಪ್ರಣಾಳಿಕೆಯ ರಚನೆ ಇದೀಗ ಕಾಂಗ್ರೆಸ್ ನಾಯಕರ ಮುಂದೆ ಇದೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಅನುಭವದ ಆಧಾರದ ಮೇಲೆ ಪರಮೇಶ್ವರ ಪ್ರಣಾಳಿಕೆ ರಚನೆ ಮಾಡಲಿದ್ದಾರೆ. ಇವರಿಗೆ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಸಹಕಾರ ನೀಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಒಂದೆಡೆ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ.. ದಳಪತಿಗಳ ದುಃಖದ ಬಗ್ಗೆ ಬಿಜೆಪಿ ವ್ಯಂಗ್ಯ

ABOUT THE AUTHOR

...view details