ಕರ್ನಾಟಕ

karnataka

ETV Bharat / state

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಸಿಎಂ, ಡಿಸಿಎಂ ಭೇಟಿ.. ಅ.20ಕ್ಕೆ ಕಾಂಗ್ರೆಸ್ ಸೇರ್ಪಡೆ - ಡಿಸಿಎಂ ಡಿ ಕೆ ಶಿವಕುಮಾರ್

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್​ ಜೊತೆ ಪೂರ್ಣಿಮಾ ಚರ್ಚೆ ನಡೆಸಿದರು.

former-bjp-mla-poornima-will-join-congress-soon
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಸಿಎಂ, ಡಿಸಿಎಂ ಭೇಟಿ.. ಅ.20ಕ್ಕೆ ಕಾಂಗ್ರೆಸ್ ಸೇರ್ಪಡೆ

By ETV Bharat Karnataka Team

Published : Oct 8, 2023, 10:00 PM IST

ಬೆಂಗಳೂರು:ಕಾಂಗ್ರೆಸ್​​ನ ಆಪರೇಷನ್ ಹಸ್ತ ಮುಂದುವರೆದಿದ್ದು, ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪೂರ್ಣಿಮಾ ಅವರು ಭಾನುವಾರ ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು. ಅಕ್ಟೋಬರ್​​ 20ಕ್ಕೆ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

ಈಗಾಗಲೇ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಸುದ್ದಿ ಸದ್ದು ಮಾಡುತ್ತಿದೆ. ಅದರಲ್ಲೂ ಜೆಡಿಎಸ್ ಜೊತೆಗಿನ ಮೈತ್ರಿ ಬಳಿಕ ಕೆಲ ಬಿಜೆಪಿ ನಾಯಕರು ಸ್ಥಳೀಯ ರಾಜಕೀಯ ಅನಿವಾರ್ಯತೆಗಳಿಂದ ಕಾಂಗ್ರೆಸ್​​ನತ್ತ ಮುಖ ಮಾಡುತ್ತಿದ್ದಾರೆ. ಇದೀಗ ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರುತ್ತಿರುವುದು ಬಿಜೆಪಿಗೆ ಹಿನ್ನಡೆ ಆಗಿದೆ.

ಕಳೆದ ತಿಂಗಳು ಕೆ ಆರ್ ಪುರಂನ ದೇವಸಂದ್ರನಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿದ್ದರು. ಆಗಲೇ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಬಗ್ಗೆ ಪುಷ್ಠಿ ನೀಡಿತ್ತು‌. ಪೂರ್ಣಿಮಾ ತಂದೆ ದಿವಂಗತ ಕೃಷ್ಣಪ್ಪ ಕೂಡ ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಇದಕ್ಕೂ ಮುನ್ನ ಕಾಂಗ್ರೆಸ್ ಸೇರ್ಪಡೆ ಸುದ್ದಿ ಕುರಿತು ಪ್ರತಿಕ್ರಿಯಿಸಿದ್ದ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್ ಪಕ್ಷವು ಸೇರ್ಪಡೆಗೆ ನನಗೆ ಆಹ್ವಾನ ಇದೆ. ಆದರೆ ಭಾರತೀಯ ಜನತಾ ಪಾರ್ಟಿ ಬಿಡುವ ಯೋಚನೆ ಮಾಡಿಲ್ಲ. ವಿಧಾನಸಭೆ ಚುನಾವಣೆಗೂ ಮುಂಚಿತವಾಗಿ ಈ ಬಗ್ಗೆ ಚರ್ಚೆ ಇತ್ತು. ಆದರೆ ಪಕ್ಷ ತೊರೆಯುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರೆ ಎಲ್ಲರಿಗೂ ಹೇಳಿಯೇ ಹೋಗುತ್ತೇನೆ. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ ಸ್ಪಷ್ಟನೆ ನೀಡಿದ್ದರು‌. ಇದೀಗ ಅಕ್ಟೋಬರ್​​ 20ಕ್ಕೆ ಪೂರ್ಣಿಮಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದು ಖಚಿತವಾಗಿದೆ.

ಪೂರ್ಣಿಮಾ ಅವರು ಮುಖ್ಯಮಂತ್ರಿಗಳ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್; ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನ

ABOUT THE AUTHOR

...view details