ಕರ್ನಾಟಕ

karnataka

ETV Bharat / state

ಬೊಮ್ಮಾಯಿ, ಬಿಎಸ್​ವೈ ನೆರಳಿನಲ್ಲೇ ಇದ್ದಾರೆ.. ಇವರ ಬಗ್ಗೆ ದೊಡ್ಡ ನಿರೀಕ್ಷೆ ಏನೂ ಇಲ್ಲ: HDK - ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

ಜನಸಾಮಾನ್ಯರು ಕಳೆದ ಎರಡು ವರ್ಷಗಳಿಂದ ಮುಖ್ಯಮಂತ್ರಿಗಳನ್ನು ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ನಾನು ಸಿಎಂ ಆಗಿದ್ದಾಗ ಕೃಷ್ಣ ಕಚೇರಿಯಲ್ಲಿ ಜನಸಾಮಾನ್ಯರ ಸಮಸ್ಯೆ ಕೇಳುತ್ತಿದ್ದೆ. ಈಗ ಆ ಪರಿಸ್ಥಿತಿ ಇಲ್ಲ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

By

Published : Jul 31, 2021, 4:53 PM IST

Updated : Jul 31, 2021, 5:05 PM IST

ಬೆಂಗಳೂರು: ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿ.ಎಸ್. ಯಡಿಯೂರಪ್ಪ ನೆರಳಿನಲ್ಲೇ ಇದ್ದಾರೆ. ಇವರ ಬಗ್ಗೆ ದೊಡ್ಡ ನಿರೀಕ್ಷೆ ಏನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್​​​ನಲ್ಲೂ ಜನತಾ ಪರಿವಾರದ ಸಿಎಂ, ಬಿಜೆಪಿಯಲ್ಲೂ ಜನತಾ ಪರಿವಾರದ ಸಿಎಂ, ಇವರಿಬ್ಬರ ಬೆಂಬಲದಿಂದ ಜನತಾ ಪರಿವಾರದ ಕುಮಾರಸ್ವಾಮಿ ಕೂಡಾ ಎರಡು ವರ್ಷ ಸಿಎಂ ಅಗಿ ಕೆಲಸ ಮಾಡಿದ್ದೇನೆ. ಜನಸಾಮಾನ್ಯರು ಕಳೆದ ಎರಡು ವರ್ಷಗಳಿಂದ ಮುಖ್ಯಮಂತ್ರಿಗಳನ್ನು ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ನಾನು ಸಿಎಂ ಆಗಿದ್ದಾಗ ಕೃಷ್ಣ ಕಚೇರಿಯಲ್ಲಿ ಜನಸಾಮಾನ್ಯರ ಸಮಸ್ಯೆ ಕೇಳುತ್ತಿದ್ದೆ. ಈಗ ಆ ಪರಿಸ್ಥಿತಿ ಇಲ್ಲ ಎಂದರು.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

ಇದನ್ನೂ ಓದಿ : ನಾನು ಈ ರಾಜ್ಯದಲ್ಲಿ ಸ್ವತಂತ್ರ ಸಿಎಂ ಆಗಿರಲಿಲ್ಲ, ಒಬ್ಬ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದೆ: ಹೆಚ್​​​ಡಿಕೆ

ಶಾಸಕ ಅರವಿಂದ್ ಬೆಲ್ಲದ್ ಮುಖ್ಯಮಂತ್ರಿಯಾಗಿ ಆಯ್ಕೆ ಆಗುತ್ತೇನೆ ಎಂಬ ನಿರೀಕ್ಷೆಯಲ್ಲಿ ಇದ್ದರು. ಕಳೆದ ಎರಡು ತಿಂಗಳಲ್ಲಿ ಯಡಿಯೂರಪ್ಪ ತೆಗೆದುಕೊಂಡ ನಿರ್ಧಾರಗಳ ಫೈಲ್ ಗಳನ್ನು ತರಿಸಿಕೊಂಡಿದ್ದರಂತೆ. ಇನ್ನೇನು ಸಿಎಂ ಆಗಿಯೇ ಬಿಡುತ್ತೇನೆಂದು ಬೆಲ್ಲದ್ ಅವರು ಈ ರೀತಿ ಮಾಡಿದರಂತೆ ಎಂಬ ವಿಷಯ ಯಾವುದೋ ಮಾಧ್ಯಮದಲ್ಲಿ ನೋಡಿದೆ. ಬಿಜೆಪಿಯಲ್ಲಿ ಅವರವರ ಮಧ್ಯೆಯೇ ಸಮನ್ವಯತೆ ಇಲ್ಲ ಎಂದು ವ್ಯಂಗ್ಯವಾಡಿದರು.

ಕೊರೊನಾ ಹೆಚ್ಚಳ: ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ನಾನೇ ಮೊದಲಿಗೆ ಲಾಕ್​​​ಡೌನ್ ಮಾಡಬೇಕು ಎಂದು ಹೇಳಿದ್ದೆ. ಸರ್ಕಾರ ಈಗಿನಿಂದಲೇ ಎಚ್ಚೆತ್ತುಕೊಳ್ಳಬೇಕು. ಈಗಾಗಲೇ ತಮಿಳುನಾಡು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಕೇಸ್ ಗಳು ಹೆಚ್ಚಾಗುತ್ತಿದೆ. ಮತ್ತೆ ಸರ್ಕಾರ ಎಚ್ಚರ ತಪ್ಪದೇ ಇರಲಿ ಎಂದು ಸಲಹೆ ನೀಡಿದರು.

ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಹೆಚ್ಚಾಗುತ್ತದೆ ಎಂದು ಕೆಲವು ತಜ್ಞರ ವರದಿಗಳು ಬರುತ್ತಿವೆ. ಮತ್ತೊಂದು ಕಡೆ ಪ್ರವಾಹದ ಸ್ಥಿತಿ ಎದುರಾಗಿದೆ. ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಜಿಲ್ಲಾ ಕೇಂದ್ರದಿಂದ ಕೆಲಸ ಮಾಡುವಂತೆ ಸೂಚಿಸಬೇಕು. ಜೊತೆಗೆ ನಮ್ಮ ರಾಜ್ಯದ ಗಡಿಗಳಲ್ಲಿ ಸೂಕ್ತ ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇತ್ತೀಚೆಗೆ ಹದಗೆಡುತ್ತಿದೆ. ಸರ್ಕಾರ ಹಾಗೂ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೇವಲ ಇನ್ನೂರು, ಮುನ್ನೂರು ರೂ.ಗೆ ಕೊಲೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಇದರ ಜೊತೆಗೆ ಸರಗಳ್ಳತನ ಹೆಚ್ಚಳವಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Last Updated : Jul 31, 2021, 5:05 PM IST

ABOUT THE AUTHOR

...view details