ಬೆಂಗಳೂರು: ರಾಜ್ಯ ರಾಜಕೀಯದ ಗೊಂದಲಗಳನ್ನು ಬದಿಗಿಟ್ಟು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ನಿರಾಳವಾಗಿ ಐಪಿಎಲ್ ಪಂದ್ಯ ವೀಕ್ಷಿಸಿದರು.
ಟೆನ್ಶನ್ ಮರೆತು ಐಪಿಎಲ್ ವೀಕ್ಷಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ - undefined
ಮಾಜಿ ಸಿಎಂ ಸಿದ್ದರಾಮಯ್ಯ ಇಂದು ನಿರಾಳವಾಗಿ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲಿ ವೀಕ್ಷಿಸಿದರು.

ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿರುವ ಸಿದ್ದರಾಮಯ್ಯ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು- ಮುಂಬೈ ನಡುವಿನ ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಆಗಮಿಸಿದ್ದರು. ಶಾಸಕ ಬೈರತಿ ಬಸವರಾಜ್ ಹಾಗೂ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಪಂದ್ಯ ವೀಕ್ಷಣೆಗೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು.
ಪಂದ್ಯ ಆರಂಭಕ್ಕೆ ಮುನ್ನವೇ ಆಗಮಿಸಿ ಗ್ಯಾಲರಿಯಲ್ಲಿ ಕುಳಿತು ಸಿದ್ದರಾಮಯ್ಯ ಅತ್ಯಂತ ಆಸಕ್ತಿಯಿಂದ ಪಂದ್ಯ ವೀಕ್ಷಿಸಿದರು. ಬೆಳಗಿನಿಂದಲೂ ರಾಜ್ಯ ರಾಜಕೀಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ನಂತರ ಕ್ರಿಕೆಟ್ ಪಂದ್ಯವನ್ನು ಅತ್ಯಂತ ಉತ್ಸಾಹದಿಂದ ಆಗಮಿಸಿದ್ದು ವಿಶೇಷ ಗಮನ ಸೆಳೆಯಿತು.