ಬೆಂಗಳೂರು:ಕಣ್ಣಿನ ಚಿಕಿತ್ಸೆಗೆ ಒಳಗಾಗಿರುವ ಹಿನ್ನೆಲೆ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಆರೋಪಕ್ಕೆ ಟ್ವೀಟ್ ಮೂಲಕ ಹೇಳಿದ್ದಾರೆ.
ಕಣ್ಣಿನ ಚಿಕಿತ್ಸೆಯಿಂದ ಪ್ರವಾಹ ಪೀಡಿತ ಸ್ಥಳಕ್ಕೆ ಹೋಗಲು ಸಾಧ್ಯವಾಗಿಲ್ಲ: ಸಿದ್ದರಾಮಯ್ಯ ಟ್ವೀಟ್
ಕಣ್ಣಿನ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರವಾಹ ಸ್ಥಳಕ್ಕೆ ಮಗ ಯತೀಂದ್ರನನ್ನು ಕಳುಹಿಸಿದ್ದಾರೆ. ಬಿಜೆಪಿ ಆರೋಪಕ್ಕೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
ನಾಲ್ಕು ದಿನಗಳ ಹಿಂದೆ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ಕೆಲ ದಿನಗಳ ಕಡ್ಡಾಯ ವಿಶ್ರಾಂತಿಯನ್ನು ಸೂಚಿಸಿದ್ದಾರೆ. ಈ ಮಧ್ಯೆ ಪ್ರವಾಹ ಪೀಡಿತ ಉತ್ತರ ಕರ್ನಾಟಕ ಭಾಗ ನಲುಗಿ ಹೋಗಿದೆ. ಅಲ್ಲಿ ಹೋಗಿ ಪರಿಹಾರ ಕಾರ್ಯದಲ್ಲಿ ಭಾಗವಹಿಸಬೇಕೆಂದು ನನ್ನ ಮನಸ್ಸು ತುಡಿಯುತ್ತಿದ್ದರೂ, ದುರಾದೃಷ್ಟವಶಾತ್ ಅದು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಆಡಳಿತ ಪಕ್ಷದಲ್ಲೇ ಇರಲಿ, ವಿರೋಧ ಪಕ್ಷದಲ್ಲೇ ಇರಲಿ ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯ ಎಂದು ನಂಬಿದ್ದೇನೆ. ನನ್ನ ಬದಲು ಮಗ ಯತೀಂದ್ರನನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಳುಹಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.