ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೈಪಾಸ್ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಕೆ ಕಾಣುತ್ತಿದ್ದು, ಸೋಮವಾರ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಬಸವರಾಜ್ ಬೊಮ್ಮಾಯಿ ಅವರಿಗೆ ಇತ್ತೀಚೆಗೆ ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಕೆಲ ಪ್ರಾಥಮಿಕ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಕೆಲ ಸಮಸ್ಯೆ ಇರುವ ಅನುಮಾನ ಮೂಡಿತ್ತು. ಹೀಗಾಗಿ, ಅವರ ಸಮಗ್ರ ಮತ್ತು ಪರಿಣಿತ ವೈದ್ಯಕೀಯ ಆರೈಕೆಗಾಗಿ, ಫೋರ್ಟಿಸ್ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕಲರ್ ಸೈನ್ಸ್ ಅಧ್ಯಕ್ಷ ಡಾ. ವಿವೇಕ್ ಜವಳಿ ಅವರ ಮೇಲ್ವಿಚಾರಣೆಯಲ್ಲಿ ಅಕ್ಟೋಬರ್ 15 ರಂದು ಅವರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಆಂಜಿಯೋಗ್ರಾಮ್ ನಂತರ, ಎಲ್ಲಾ ಮೂರು ಪರಿಧಮನಿಯ ಅಪಧಮನಿಗಳಲ್ಲಿ ತೀವ್ರ ಮತ್ತು ಪ್ರಸರಣ ತಡೆ ಇರುವುದು ಕಂಡು ಬಂದಿತ್ತು. ಈ ಲಕ್ಷಣಗಳು ಇದ್ದರೆ ಭವಿಷ್ಯದಲ್ಲಿ ಹೃದಯಾಘಾತ ಸಂಭವನೀಯ ಅಪಾಯವನ್ನು ಉಂಟುಮಾಡುತ್ತವೆ. ಹೀಗಾಗಿ ಅವರಿಗೆ ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಕ್ರಿಯೆಯನ್ನು ನಡೆಸಿ, ಫೈವ್ ಗ್ರಾಫ್ಸ್ ಸಮಸ್ಯೆ ಉಂಟಾಗಿದ್ದ ಪರಿಧಮನಿಯ ಅಪಧಮನಿ ಹೃದಯದ ಬಡಿತದ ಮೇಲೆ ಇರಿಸಲಾಯಿತು. ಶಸ್ತ್ರಚಿಕಿತ್ಸೆಯ ಬಳಿಕ ಬೊಮ್ಮಾಯಿ ಅವರು ವೇಗವಾಗಿ ಚೇತರಿಕೆ ಕಾಣುತ್ತಿದ್ದು, ಒಂದೆರಡು ವಾರದಲ್ಲಿ ಎಂದಿನಂತೆ ತಮ್ಮ ದಿನಚರಿಯಲ್ಲಿ ತೊಡಗಿಕೊಳ್ಳಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.