ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಬಿಡದಿಯ ತೋಟದ ಮನೆಯಲ್ಲಿ ಗೋ ಪೂಜೆ ನೆರವೇರಿಸಿದರು.
ಬಿಡದಿಯ ತೋಟದ ಮನೆಯಲ್ಲಿ ಗೋ ಪೂಜೆ ನೆರವೇರಿಸಿದ ಹೆಚ್ಡಿಕೆ ದಂಪತಿ - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಬೆಳಕಿನ ಹಬ್ಬ ದೀಪಾವಳಿ ವೇಳೆ ಗೋವಿನ ಪೂಜೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಬಿಡದಿಯ ತೋಟದಲ್ಲಿ ಗೋ ಪೂಜೆಯನ್ನು ನೆರವೇರಿಸಲಾಯಿತು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿಯ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ. ಕೆಲವೆಡೆ ರೈತರು ಹಟ್ಟಿಹಬ್ಬವೆಂದು ಆಚರಿಸುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಅದರಲ್ಲೂ ಬೆಳಕಿನ ಹಬ್ಬ ದೀಪಾವಳಿ ವೇಳೆ ಗೋವಿನ ಪೂಜೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಬಿಡದಿಯ ನನ್ನ ತೋಟದಲ್ಲಿ ಗೋ ಪೂಜೆಯನ್ನು ನೆರವೇರಿಸಲಾಯಿತು ಎಂದು ತಿಳಿಸಿದ ಕುಮಾರಸ್ವಾಮಿ ಅವರು, ಮತ್ತೊಮ್ಮೆ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.