ಬೆಂಗಳೂರು :ಕನ್ನಡಿಗರ ಬಹುಕಾಲದ ಒತ್ತಾಯದ ಬಳಿಕವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಇಲ್ಲ; ಹೆಚ್‌ಡಿಕೆ ಅಸಮಾಧಾನ - ಐಬಿಪಿಎಸ್ ಪರೀಕ್ಷೆ
ಬ್ಯಾಂಕ್ ನೌಕರಿಗೆ ಸಂಬಂಧಿಸಿದ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲವೆಂದು ಕೇಂದ್ರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಇದರ ಜೊತೆಗೆ ಹಿಂದೆ ಇದ್ದ ನಿಯಮವನ್ನು ವಾಪಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ವಿರೋಧಿಸುತ್ತೇನೆಂದು ಹೆಚ್‌ಡಿಕೆ ಟ್ವಿಟ್ ಮಾಡಿದ್ದಾರೆ.