ಬೆಂಗಳೂರು:ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. 'ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈ ಕಟ್ಟಿ ಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,' ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಇಂದು ಭೂ ಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ 'ನಿಯಂತ್ರಿಸಲಾಗುತ್ತಿಲ್ಲ,' ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ ಎಂದು ಟೀಕಿಸಿದ್ದಾರೆ.