ಕರ್ನಾಟಕ

karnataka

ETV Bharat / state

2 ಸಾವಿರ ಕೋಟಿ ರೂ. ಕಿಕ್ ಬ್ಯಾಕ್‌ ಆರೋಪ: ತನಿಖೆಗೆ ಆಗ್ರಹಿಸಿದ ಹೆಚ್​ಡಿಕೆ - kick back in irrigation

ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ 2 ಸಾವಿರ ಕೋಟಿ ರೂ. ಕಿಕ್ ಬ್ಯಾಕ್‌ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು-ಹೆಚ್.ಡಿ.ಕುಮಾರಸ್ವಾಮಿ

hd kumaraswamy
ಹೆಚ್.ಡಿ.ಕುಮಾರಸ್ವಾಮಿ

By

Published : Jun 19, 2021, 1:48 PM IST

ಬೆಂಗಳೂರು:2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ 150 ಕೋಟಿ ರೂ. ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ 2 ಸಾವಿರ ಕೋಟಿ ರೂ. ನೀರಾವರಿ ಕಿಕ್ ಬ್ಯಾಕ್‌ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ ಬಿ.ಎಸ್.ಯಡಿಯೂರಪ್ಪ 2006ರಲ್ಲಿ ನಾನು ಇಟ್ಟ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು ಎಂದು ಹೆಚ್​​ಡಿಕೆ ಆಗ್ರಹಿಸಿದ್ದಾರೆ.

ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ಗಂಭೀರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಆರಂಭವಾಗಲಿರುವ 4 ವರ್ಷಗಳ ಪದವಿಯಲ್ಲಿ ಕನ್ನಡ ಭಾಷಾ ಕಲಿಕೆಯನ್ನು 1 ವರ್ಷಕ್ಕೆ ಸೀಮಿತಗೊಳಿಸುವ ಉನ್ನತ ಶಿಕ್ಷಣ ಸಮಿತಿಯ ಪ್ರಸ್ತಾವ ನಿರಾಸೆ ತಂದಿದೆ. ಕನ್ನಡ ಭಾಷಾ ಕಲಿಕೆ ಅದೊಂದು ವಿಷಯ ಮಾತ್ರವಲ್ಲ, ಯುವ ಸಮುದಾಯದಲ್ಲಿ ಸಾಕ್ಷಿಪ್ರಜ್ಞೆ ಬಿತ್ತುವ, ಅವರನ್ನು ಸೂಕ್ಷ್ಮಮತಿಗಳನ್ನಾಗಿ ಮಾಡುವ ಯಶಸ್ವಿ ಪ್ರಯತ್ನ ಎಂದಿದ್ದಾರೆ.

ರಕ್ತಕ್ಕೆ ಅಂಟಿದ ಭಾಷೆ ಕಲಿಕೆಯನ್ನು 1 ವರ್ಷಕ್ಕೆ ಮಿತಿಗೊಳಿಸುವುದು ಅವೈಜ್ಞಾನಿಕ. ಈ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ ಅವರು ಸ್ಪಷ್ಟನೆ ನೀಡಿದ್ದಾರೆ. ಈಗಿನ ವ್ಯವಸ್ಥೆಯಂತೆ 2 ವರ್ಷದ ಕನ್ನಡ ಕಲಿಕೆಗೆ ತೊಂದರೆ ಇಲ್ಲ ಎಂದು ಹೇಳಿರುವುದು ಸ್ವಲ್ಪ ಸಮಾಧಾನ ತಂದಿದೆ. ಅದರೆ 1 ವರ್ಷಕ್ಕೆ ಮಿತಿಗೊಳಿಸುವ ಪ್ರಯತ್ನಗಳು ನಡೆದರೆ ಪರಿಣಾಮ ಕೆಟ್ಟದಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಓದಿ:ಕೇಂದ್ರದಿಂದ ಶೀಘ್ರ ಅನುಮತಿ ಪಡೆದು ಮೇಕೆದಾಟು ಯೋಜನೆ ಆರಂಭಿಸಿ: ಹೆಚ್​​ಡಿಕೆ

ABOUT THE AUTHOR

...view details