ಕರ್ನಾಟಕ

karnataka

ETV Bharat / state

ಆಯುಷ್ ಇಲಾಖೆ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳಿ: ಹೆಚ್​ಡಿಕೆ ಆಗ್ರಹ - HD Kumaraswamy tweet

ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

HD Kumaraswamy
ಹೆಚ್.ಡಿ.ಕುಮಾರಸ್ವಾಮಿ

By

Published : Aug 23, 2020, 3:02 PM IST

ಬೆಂಗಳೂರು: ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ 'ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರ ನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್‌ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ?" ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನ ಬದ್ಧ ‘ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ? ಎಂದು ಕಿಡಿ ಕಾರಿದ್ದಾರೆ.

ABOUT THE AUTHOR

...view details