ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದು ಟೀಕಿಸಿದ್ದಾರೆ.