ಕರ್ನಾಟಕ

karnataka

By

Published : May 1, 2022, 8:06 PM IST

ETV Bharat / state

ಅವರ ಮೆದುಳು ಹಿಮ್ಮುಖವಾಗಿ ಚಲಿಸುತ್ತಿರಬಹುದು: ಮಹಾ ಡಿಸಿಎಂಗೆ ಹೆಚ್​ಡಿಕೆ ತಿರುಗೇಟು

ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಹಿಂದೆ; ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದ ಅವರು, ಪುನಃ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಖಂಡನೀಯ. ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರ್ಕಾರದ ಬೆಂಬಲವಿದೆ ಎಂದು ಪುಣೆಯಲ್ಲಿ ಅವರಿಂದು ಅಪರಿಪಕ್ವ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಟಾಂಗ್​ ನೀಡಿದ್ದಾರೆ.

ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬಹುದು: ಮಹಾ ಡಿಸಿಎಂಗೆ ಹೆಚ್​ಡಿಕೆ ತಿರುಗೇಟು
ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬಹುದು: ಮಹಾ ಡಿಸಿಎಂಗೆ ಹೆಚ್​ಡಿಕೆ ತಿರುಗೇಟು

ಬೆಂಗಳೂರು: ಕರ್ನಾಟಕದ ಗಡಿಯಲ್ಲಿ ಮರಾಠಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ತಮ್ಮ ಸರ್ಕಾರ ಬೆಂಬಲ ನೀಡುತ್ತದೆ ಎಂದು ಹೇಳಿಕೆ ನೀಡಿರುವ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಜಿತ್‌ ಪವಾರ್‌ ಅವರು ಚೀನಾ ಮನಃಸ್ಥಿತಿಯ ಆಕ್ರಮಣಶೀಲತೆ ಹೊಂದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಅವರಿನ್ನೂ ಗಡಿಗಳ ಬಗ್ಗೆ ಮಾತನಾಡುತ್ತಿರುವುದನ್ನು ನೋಡಿದರೆ, ಅವರ ಮೆದುಳು ಹಿಮ್ಮುಖವಾಗಿ ಚಲಿಸುತ್ತಿರಬಹುದು ಎಂದು ಟಾಂಗ್‌ ಕೊಟ್ಟಿದ್ದಾರೆ.

ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಹಿಂದೆ; ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದ ಅವರು, ಪುನಃ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಖಂಡನೀಯ. ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರ್ಕಾರದ ಬೆಂಬಲವಿದೆ ಎಂದು ಪುಣೆಯಲ್ಲಿ ಅವರಿಂದು ಅಪರಿಪಕ್ವ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೆಂಪು ಮೆಣಸಿನಕಾಯಿ ಬಗ್ಗೆ ಸಿಎಂ ಮಮತಾಗೆ ಸಲಹೆ ಕೊಟ್ರಾ ಪ್ರಧಾನಿ ಮೋದಿ?

1947ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. 1950ರಲ್ಲಿ ಭಾರತ ಗಣರಾಜ್ಯವಾಗಿ ಅವತರಿಸಿತು. ಅದಾದ ಮೇಲೆ ಭಾಷಾವಾರು ಪ್ರಾಂತ್ಯಗಳು ರಾಜ್ಯಗಳಾದವು. ಸ್ವಾತಂತ್ರ್ಯದ ʼಅಮೃತ ಮಹೋತ್ಸವʼ ಈ ಕಾಲದಲ್ಲೂ ಅಜಿತ್ ಪವಾರ್ ಇನ್ನೂ ಗಡಿ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದರೆ, ಅವರ ಮೆದುಳು ಹಿಮ್ಮುಖವಾಗಿ ಚಲಿಸುತ್ತಿರಬೇಕಷ್ಟೇ. ತಮ್ಮ ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಗಡಿ ಜನರ ಬಗ್ಗೆ ಕಳಕಳಿಯೂ ಇಲ್ಲ. ಎಂದೋ ಮುಗಿದ ವಿಷಯ ಇಟ್ಟುಕೊಂಡು ರಾಜಕೀಯ ಪ್ರಹಸನ ನಡೆಸುತ್ತಿದ್ದಾರಷ್ಟೇ. ಚೀನಾ ಮನಃಸ್ಥಿತಿಯ ಆಕ್ರಮಣಶೀಲ ಮನೋಭಾವದಿಂದ ಅಜಿತ್ ಪವಾರ್ ಹೊರಬರುವುದು ಒಳ್ಳೆಯದು ಎಂದಿದ್ದಾರೆ.

ಬೆಳಗಾವಿ ಬಗ್ಗೆ ಬೇಳೆ ಬೇಯಿಸಿಕೊಳ್ಳುವ ಒಡಕು ಪ್ರವೃತ್ತಿಯನ್ನು ಮರಾಠಿ ನಾಯಕರು ಬಿಡಬೇಕು. ಇಲ್ಲವಾದರೆ, ದೇಶದ ಉದ್ದಗಲಕ್ಕೂ ಈಗಲೂ ಬೂದಿಮುಚ್ಚಿದ ಕೆಂಡದಂತಿರುವ ಇಂಥ ಸೂಕ್ಷ್ಮ ವಿಷಯಗಳು ಮುಂಚೂಣಿಗೆ ಬಂದು ದೇಶವೇ ಛಿದ್ರವಾಗುವ ಅಪಾಯವಿದೆ. ಇದನ್ನು ಅರ್ಥ ಮಾಡಿಕೊಂಡು, ಕೇಂದ್ರವು ಇಂಥ ಆಕ್ರಮಣಶೀಲ ಮನಃಸ್ಥಿತಿಯುಳ್ಳವರ ಕಿವಿ ಹಿಂಡಬೇಕು. ಎಲ್ಲ ಭಾಷಿಕರು ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರಿದ್ದಾರೆ. ಅವರ ಒಳಿತಿನ ಬಗ್ಗೆ ಅಜಿತ್ ಪವಾರ್ ಮಾತನಾಡಲಿ ಎಂದಿದ್ದಾರೆ.

For All Latest Updates

TAGGED:

ABOUT THE AUTHOR

...view details