ಮೈಸೂರು:ಹೋರಾಟದಿಂದ ರಾಜಕೀಯದಲ್ಲಿ ಮೇಲೇರಿದವರು ಎಂಬುವುದನ್ನು ‘ಅನರ್ಹ ಅಧಿಕಾರ’ದ ಮದ ಮರೆಸಿದಂತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪರಿಗೆ, ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು ’ಅನರ್ಹ ಅಧಿಕಾರ’ದ ಮದ ಮರೆಸಿದಂತಿದೆ. ಅವರ ಹೋರಾಟಗಳನ್ನು ಹಿಂದಿನ ಸರ್ಕಾರಗಳು ಬಂದೂಕು, ಗುಂಡುಗಳಿಂದ ಹತ್ತಿಕ್ಕಿದ್ದವೇ? ಹೀಗಿದ್ದೂ, ಹೋರಾಟಗಳ ಮೇಲೆ ಬಿಎಸ್ವೈಗೆ ಏಕೆ ಇಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದ, ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಬಿಎಸ್ವೈ ನೈತಿಕ ಹೊಣೆಗಾರಿಕೆ ಅರಿತು ಈ ಕೂಡಲೇ ಮೃತ ಹೋರಾಟಗಾರ ಕುಟುಂಬಗಳ ಕ್ಷಮೆ ಕೋರಬೇಕು. ಅಧಿಕಾರದ ಅಮಲಿನಲ್ಲಿರುವವರ ದಾಹ, ಕ್ರೌರ್ಯಕ್ಕೆ ಪ್ರಜೆಗಳ ಹೆಣಗಳು ತೋರಣದಂತೆ ಕಟ್ಟಲ್ಪಡುತ್ತಿರುತ್ತವೆ. ಅಧಿಕಾರ ಹಪಾಹಪಿಗಳು ಸಾವಿನ ದಲ್ಲಾಳಿಗಳಾಗುತ್ತಾರೆ. ಇಂಥವರೇ ತುಂಬಿರುವ ಜನ ವಿರೋಧಿ ಪ್ರಭುತ್ವ ಅಂತ್ಯ ಕಾಲ ಸಮೀಪಿಸಿದೆ ಎಂದಿದ್ದಾರೆ.
ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದ, ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಯಡಿಯೂರಪ್ಪ ನೈತಿಕ ಹೊಣೆಗಾರಿಕೆ ಅರಿತು ಈ ಕೂಡಲೇ ಮೃತ ಹೋರಾಟಗಾರ ಕುಟುಂಬಗಳ ಕ್ಷಮೆ ಕೋರಬೇಕು. ಫೈರ್ ಮಾಡಿದೆವು, ಒಂದು ಗುಂಡೂ ಬೀಳಲಿಲ್ವಲ್ಲ, ಒಬ್ಬರೂ ಸಾಯಲಿಲ್ವಲ" ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಬಿಎಸ್‌ವೈ, ಬಿಜೆಪಿ ಹೊರಬೇಕು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.