ಕರ್ನಾಟಕ

karnataka

ETV Bharat / state

ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್​ಗೆ ಜ್ಞಾನೋದಯ ಮಾಡಿಸುವ ಫಲಿತಾಂಶ ಇದು: ಹೆಚ್​​​ಡಿಕೆ - ವಿಧಾನಸೌಧದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಗೋವಾ, ಪಂಜಾಬ್​​​ನಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದರು. ಕರ್ನಾಟಕದಿಂದ ಸೂತ್ರಧಾರರನ್ನು ಗೋವಾಗೆ ಕಳುಹಿಸಿದ್ದರು ಎಂದ ಅವರು, ಜೆಡಿಎಸ್ ಮುಗಿಸಲು ಹೋದವರಿಗೆ ಪಾಠ ಕಲಿಸಿದ ಚುನಾವಣಾ ಫಲಿತಾಂಶ ಇದಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಪೈಪೋಟಿ ನೀಡಲು ಪ್ರಾದೇಶಿಕ ಪಕ್ಷಕ್ಕೆ ಮಾತ್ರ ಸಾಧ್ಯ ಎಂಬುದನ್ನು ಈ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ಹೆಚ್​​​ಡಿಕೆ ಹೇಳಿದರು.

ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್
ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್

By

Published : Mar 10, 2022, 3:56 PM IST

ಬೆಂಗಳೂರು:ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಜ್ಞಾನೋದಯ ಮಾಡಿಕೊಳ್ಳುವ ಫಲಿತಾಂಶ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟಾಂಗ್ ನೀಡಿದರು.

ಕಾಂಗ್ರೆಸ್​​ಗೆ ಟಾಂಗ್ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೇನು ಅಧಿಕಾರಕ್ಕೆ ಬಂದೇ ಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಪಂಚ ರಾಜ್ಯಗಳ ಫಲಿತಾಂಶ ಶಾಕ್ ನೀಡಿದೆ. ಐದು ರಾಜ್ಯಗಳ ಫಲಿತಾಂಶ ಸಂಬಂಧ ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಮೀಕ್ಷೆಗಳು ಭವಿಷ್ಯ ನುಡಿದಂತೆ ಚುನಾವಣೆ ಫಲಿತಾಂಶ ಬರುತ್ತಿದೆ ಎಂದು ಹೇಳಿದರು.

ಗೋವಾ, ಪಂಜಾಬ್​​​ನಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದರು. ಕರ್ನಾಟಕದಿಂದ ಸೂತ್ರಧಾರರನ್ನು ಗೋವಾಗೆ ಕಳುಹಿಸಿದ್ದರು ಎಂದ ಅವರು, ಜೆಡಿಎಸ್ ಮುಗಿಸಲು ಹೋದವರಿಗೆ ಪಾಠ ಕಲಿಸಿದ ಚುನಾವಣಾ ಫಲಿತಾಂಶ ಇದಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಪೈಪೋಟಿ ನೀಡಲು ಪ್ರಾದೇಶಿಕ ಪಕ್ಷಕ್ಕೆ ಮಾತ್ರ ಸಾಧ್ಯ ಎಂಬುದನ್ನು ಈ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ತಿಳಿಸಿದರು.

ಸೂತ್ರಧಾರನ್ನು ಕರೆಸಿಕೊಂಡಿದ್ದಾರೆ. ಕರ್ನಾಟಕದಿಂದ ಸರ್ಕಾರ ರಚನೆ ಮಾಡಲು ನಾಯಕತ್ವ ಕೊಡಲು, ಶಾಸಕರನ್ನು ರಕ್ಷಣೆ ಮಾಡಲು ಕರೆಸಿಕೊಂಡಿದ್ದಾರೆ. ಈಗ ಪರಿಸ್ಥಿತಿ ಏನಾಗಿದೆ ಎಂಬುದು ಅವರಿಗೆ ಅರ್ಥ ಆಗಿರುತ್ತದೆ ಎಂದು ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಇದನ್ನೂ ಓದಿ : ಪಂಜಾಬ್​ನಲ್ಲೊಬ್ಬ ಸಿಧು, ರಾಜ್ಯದಲ್ಲೊಬ್ಬ ಸಿದ್ದು - ಇಲ್ಲೂ ಕಾಂಗ್ರೆಸ್ ಅವನತಿಯಾಗುತ್ತೆ: ಜಗದೀಶ್ ಶೆಟ್ಟರ್ ಲೇವಡಿ

ನೀರಾವರಿ ವಿಚಾರಗಳನ್ನು ಮುಂದಿಟ್ಟುಕೊಂಡು ನಾವು ಹೋರಾಟ ಮಾಡುತ್ತೇವೆ. ಐದು ರಾಜ್ಯಗಳ ಪರಿಸ್ಥಿತಿ ಬೇರೆ, ನಮ್ಮ ರಾಜ್ಯಗಳ ಪರಿಸ್ಥಿತಿ ಬೇರೆ. ಹಿಂದೆ ಪಶ್ಚಿಮ ಬಂಗಾಳದಲ್ಲಿ ಬಂದ ಫಲಿತಾಂಶ ಹಾಗೂ ಪಂಜಾಬ್​​​ನಲ್ಲಿ ಆಗಿರುವ ಬದಲಾವಣೆ ನಮಗೆ ಪ್ರೇರಣೆ ತಂದಿದೆ ಎಂದು ಹೇಳಿದರು.

For All Latest Updates

TAGGED:

ABOUT THE AUTHOR

...view details