ಬೆಂಗಳೂರು: ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದು ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೈತಿಕ ಹೊಣೆ ಹೊತ್ತು ಕೂಡಲೇ ಮೃತ ಹೋರಾಟಗಾರರ ಕುಟುಂಬಗಳ ಕ್ಷಮೆಯಾಚಿಸಬೇಕೆಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ ಎಸ್ ಯಡಿಯೂರಪ್ಪ ತಾವೂ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು 'ಅನರ್ಹ ಅಧಿಕಾರದ' ಮದ ಮರೆಸಿದಂತಿದೆ. ಅವರ ಹೋರಾಟಗಳನ್ನು ಹಿಂದಿನ ಸರ್ಕಾರಗಳು ಬಂದೂಕು, ಗುಂಡುಗಳಿಂದ ಹತ್ತಿಕ್ಕಿದ್ದವೇ? ಹೀಗಿದ್ದೂ, ಹೋರಾಟಗಳ ಮೇಲೆ ಯಡಿಯೂರಪ್ಪನವರಿಗೆ ಏಕೆ ಇಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.