ಕರ್ನಾಟಕ

karnataka

ETV Bharat / state

ರಾಮನಗರ ಲಾಕ್‌ಡೌನ್‌ ಮಾಡಿ; ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ - ರಾಮನಗರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ

ಕೊರೊನಾ ತಡೆಗಟ್ಟಲು ಬೆಂಗಳೂರಿನ ಮಾದರಿಯಲ್ಲಿ ರಾಮನಗರ ಜಿಲ್ಲೆಯಲ್ಲಿಯೂ ಒಂದು ವಾರ ಸಂಪೂರ್ಣ ಲಾಕ್​ಡೌನ್​ ಮಾಡುವಂತೆ ಮಾಜಿ ಸಿಎಂ ಎಚ್​​.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

dsdsd
ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

By

Published : Jul 12, 2020, 10:02 PM IST

ಬೆಂಗಳೂರು: ರಾಜ್ಯ ರಾಜಧಾನಿಗೆ ಹೊಂದಿಕೊಂಡಿರುವ ರಾಮನಗರ ಜಿಲ್ಲೆಯಲ್ಲಿ ಕೊರೊನಾ ತಡೆಯಲು ಲಾಕ್‌ಡೌನ್‌ ಮಾಡುವಂತೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಸಂಬಂಧ ಕಂದಾಯ ಸಚಿವ ಆರ್‌. ಅಶೋಕ್‌, ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದ ಎಚ್‌ಡಿಕೆ ಲಾಕ್‌ಡೌನ್‌ ಅಗತ್ಯತೆಯನ್ನು ವಿವರಿಸಿದ್ದಾರೆ.

ಈಗಾಗಲೇ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕುಗಳಿಗಿಂತಲೂ ಅಧಿಕ ಸೋಂಕಿನ ಪ್ರಕರಣಗಳನ್ನು ಹೊಂದಿರುವ ರಾಮನಗರ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲೇಬೇಕಾಗಿರುವುದು ಅಗತ್ಯವಿದೆ ಎಂದು ಎಚ್‌ಡಿಕೆ ಪ್ರತಿಪಾದಿಸಿದ್ದಾರೆ.

ABOUT THE AUTHOR

...view details