ಕರ್ನಾಟಕ

karnataka

ETV Bharat / state

ಅಬ್ಬರ ಜಾಸ್ತಿ, ಅಭಿವೃದ್ಧಿ ನಾಸ್ತಿ.. ಬಿಜೆಪಿ ಅಸ್ತಿತ್ವಕ್ಕೇ ಆಪರೇಷನ್‌ ಆಗುವ ಕಾಲ ಸನ್ನಿಹಿತ: ಕುಮಾರಸ್ವಾಮಿ - former CM Kumarswami tweet against BJP leaders

ಜೆಡಿಎಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ- ಸಿ ಟಿ ರವಿ ಹೇಳಿಕೆಗೆ ಹೆಚ್​ಡಿಕೆ ಗರಂ- ಮೋದಿ ಮುಂದೆ ಸೊಂಟದಿಂದ ಬಾಗಿ ತಲೆ ಅಲ್ಲಾಡಿಸುವುದು ಆಂತರಿಕ ಪ್ರಜಾಪ್ರಭುತ್ವನಾ ಎಂದು ತಿರುಗೇಟು

former-cm-kumarswamy-tweet-against-bjp
ಆಪರೇಷನ್‌ ದಕ್ಷಿಣ್‌ ಅಲ್ಲ, ಬಿಜೆಪಿ ಅಸ್ತಿತ್ವಕ್ಕೇ ಆಪರೇಷನ್‌ ಆಗುವ ಕಾಲ ಹತ್ತಿರದಲ್ಲೇ ಇದೆ : ಕುಮಾರಸ್ವಾಮಿ ಭವಿಷ್ಯ

By

Published : Jul 4, 2022, 5:40 PM IST

Updated : Jul 4, 2022, 6:57 PM IST

ಬೆಂಗಳೂರು :ಜೆಡಿಎಸ್‌ʼನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂಬ ಮಾಜಿ ಸಚಿವ ಸಿ.ಟಿ‌. ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಆಂತರಿಕ ಪ್ರಜಾಪ್ರಭುತ್ವ ಎಂದರೆ, ನರೇಂದ್ರ ಮೋದಿ ಮುಂದೆ ಸತ್ತ ಸೊಂಟದವರಂತೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ? ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಜೀ ಜೀ ಎನ್ನುತ್ತಾ ಜೀ ಹುಜೂರ್‌ ಎನ್ನುವುದಾ? 25 ಸಂಸದರ ಯೋಗ್ಯತೆ ಏನು? ಅವರಿಗೆಷ್ಟು ಸ್ವಾತಂತ್ರ್ಯ ಕೊಟ್ಟಿದ್ದೀರಿ? ಎಂದು ಕೇಳಿದ್ದಾರೆ.

ಆಪರೇಷನ್‌ ದಕ್ಷಿಣ್‌, ಇದು ಬಿಜೆಪಿಯ ಹೊಸ ಸ್ಲೋಗನ್. ಹೈದರಾಬಾದ್‌ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾವನಾನ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು, ಜನರ ಮನಸ್ಸುಗಳನ್ನು ಒಡೆದು ʼರಾವಣ ರಾಜಕೀಯʼದ ವಿನಾಶಕಾರಿ ದಾರಿಗೆ ಹಿಡನ್‌ ಅಜೆಂಡಾ ಸಿದ್ಧ ಮಾಡಲಾಯಿತಾ? ಹೇಳಿ ಮಾನ್ಯ ಸಿ.ಟಿ. ರವಿಯವರೇ? ಎಂದು ಹೆಚ್​ಡಿಕೆ ವ್ಯಂಗ್ಯವಾಡಿದ್ದಾರೆ.

ಆಗ ಕಾಂಗ್ರೆಸ್‌ ಮುಕ್ತ ಭಾರತ! ಈಗ ಪರಿವಾರಮುಕ್ತ ಭಾರತ!‌ ನಂತರ ಪ್ರತಿಪಕ್ಷ ಮುಕ್ತ ಭಾರತ! ಮುಂದೆ ಸಂಪೂರ್ಣ ಪ್ರಜಾಪ್ರಭುತ್ವ ಮುಕ್ತ ಭಾರತ್‌ ನಿರ್ಮಾಣ!. ಇದಲ್ಲವೇ ನಿಮ್ಮ ಬಿಜೆಪಿಯ ಭವ್ಯಗುರಿ? ಉತ್ತರಿಸಿ. ದಕ್ಷಿಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಶಕ್ತಿ. ಇಲ್ಲಿ ಹೆಜ್ಜೆ ಇಡಲು ಬಿಜೆಪಿಗೆ ಆಗುತ್ತಿಲ್ಲ. ಆಪರೇಷನ್‌ ಕಮಲದಿಂದ ಕರ್ನಾಟಕದಲ್ಲಿ ಅಧಿಕಾರ ಹಿಡಿದಿರಿ. ಒಡಿಶಾ, ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳದಲ್ಲಿ ನಿಮ್ಮ ಬೇಳೆ ಬೇಯಲಿಲ್ಲ. ಅದಕ್ಕೀಗ ʼಪರಿವಾರಮುಕ್ತ ರಾಜಕೀಯʼ ಎಂದು ರಾಗ ತೆಗೆಯುತ್ತಿದ್ದೀರಿ. ಸತ್ಯ ಹೇಳಿ ಸಿ.ಟಿ.ರವಿಯವರೇ ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಪ್ರಾದೇಶಿಕ ಪಕ್ಷಗಳನ್ನು ಎದುರಿಸಲಾಗದ ಬಿಜೆಪಿ, ಈಗ ಪರಿವಾರ ಜಪ ಮಾಡುತ್ತಿದೆ. ಅಯ್ಯೋ ಪಾಪ!! ಮಹಾರಾಷ್ಟ್ರದಲ್ಲಿ ಆಪರೇಷನ್‌ ಕಮಲ ಮಾಡಿ ನೀವು ಮುಖ್ಯಮಂತ್ರಿ ಮಾಡಿದ ಶ್ರೀ ಏಕನಾಥ ಶಿಂದೆ ಅವರ ʼಏಕ ಪರಿವಾರ ಪಾಲಿಟಿಕ್ಸ್‌ʼ ಗೊತ್ತಿರಲಿಲ್ಲವೇ? ಬೋಧನೆ ಒಂದು! ಭೋಜನ ಇನ್ನೊಂದು!! ಛೇ, ಹೇಸಿಗೆ.. ಯಡಿಯೂರಪ್ಪ & ಸನ್ಸ್‌, ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ, ಅಶೋಕ್-ರವಿ, ಸೋಮಣ್ಣ-ಅರುಣ್‌ ಸೋಮಣ್ಣ, ಲಿಂಬಾವಳಿ-ರಘು, ವಿಶ್ವನಾಥ್-ವಾಣಿ ವಿಶ್ವನಾಥ್‌, ಶೆಟ್ಟರ್-ಪ್ರದೀಪ್‌ ಶೆಟ್ಟರ್‌, ನಿರಾಣಿ-ಹನುಮಂತ ನಿರಾಣಿ, ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್ & ಜಾರಕಿಹೊಳಿ, ಕತ್ತಿ, ಅಂಗಡಿ, ಉದಾಸಿ ಕುಟುಂಬಗಳು.. ಇದೆಲ್ಲಾ ಏನು?. ಪರಿವಾರ ರಾಜಕಾರಣಕ್ಕೆ ಬಿಜೆಪಿ ಅತೀತವಲ್ಲ. ರಾಜ್ಯದ ಲೆಕ್ಕ ಕೊಟ್ಟಿದ್ದೇನೆ. ಭಾರತದ ಪಟ್ಟಿ ಕೊಡಲೇ? ಅಬ್ಬರ ಜಾಸ್ತಿ, ಅಭಿವೃದ್ಧಿ ನಾಸ್ತಿ. ಇದು ಬಿಜೆಪಿ ನೀತಿ. ಆಪರೇಷನ್‌ ದಕ್ಷಿಣ್‌ ಅಲ್ಲ, ಬಿಜೆಪಿ ಅಸ್ತಿತ್ವಕ್ಕೇ ಆಪರೇಷನ್‌ ಆಗುವ ಕಾಲ ಹತ್ತಿರದಲ್ಲೇ ಇದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಓದಿ :ಯುವಕನ ಕೊಂದು, ಪ್ರಧಾನಿಗೆ ಜೀವ ಬೆದರಿಕೆ ಹಾಕಿದವರಿಗೆ ಉಗ್ರ ಶಿಕ್ಷೆಯಾಗಬೇಕು: ರೇಣುಕಾಚಾರ್ಯ

Last Updated : Jul 4, 2022, 6:57 PM IST

For All Latest Updates

TAGGED:

ABOUT THE AUTHOR

...view details