ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣದೊಂದು ಶಸ್ತ್ರಚಿಕಿತ್ಸೆಗಾಗಿ ಹೆಚ್ಎಎಲ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲವ್ಯಾಧಿ ಸಂಬಂಧ ಇಂದು ಶಸ್ತ್ರಚಿಕಿತ್ಸೆ ನಡೆಯಲಿದ್ದು, ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಬಳಿಕ ನಾಲ್ಕು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಜೊತೆಗೆ ಪತ್ನಿ, ಪುತ್ರ ಆಸ್ಪತ್ರೆಗೆ ತೆರಳಿದ್ದಾರೆ.
ಸಣ್ಣ ಶಸ್ತ್ರಚಿಕಿತ್ಸೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು - Siddaramaiah hospitalised for minor surgery
ಮೂಲವ್ಯಾಧಿ ಸಂಬಂಧ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Last Updated : Dec 2, 2022, 11:15 AM IST