ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಅಧಿನಾಯಕಿಯನ್ನು ಭೇಟಿ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ - Siddaramaiah met sonia gandhi

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಈ ಎರಡೂ ಸ್ಥಾನಗಳ ಜವಾಬ್ದಾರಿ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Siddu and sonia

By

Published : Oct 16, 2019, 2:30 PM IST

Updated : Oct 16, 2019, 3:04 PM IST

ಬೆಂಗಳೂರು:ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಈ ಎರಡೂ ಮಹತ್ವದ ಜವಾಬ್ದಾರಿಯನ್ನು ತಮಗೆ ವಹಿಸಿದ್ದ ಸೋನಿಯಾಗಾಂಧಿ ಅವರಿಗೆ ಈ ಭೇಟಿ ಸಂದರ್ಭ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ರಾಜಕೀಯ ಚಟುವಟಿಕೆಗಳು, ಇತ್ತೀಚಿನ ವಿದ್ಯಮಾನಗಳು ಕೇಂದ್ರ ಸರ್ಕಾರದ ಒತ್ತಡ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು ಜೊತೆಗೆ ನೆರೆ ಹಾಗೂ ಬರದಿಂದಾಗಿ ಕರ್ನಾಟಕದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಇದೇ ಸಂದರ್ಭ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದು, ಸೋನಿಯಾ ಗಾಂಧಿ ಇಂದು ಇತರೆ ರಾಷ್ಟ್ರೀಯ ನಾಯಕರನ್ನು ಸಹ ಭೇಟಿ ಮಾಡಿ ನಾಳೆ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಡಿದ್ದು ಕೇರಳಕ್ಕೆ ತೆರಳಿ ಅಲ್ಲಿನ ಉಪಚುನಾವಣೆ ಪ್ರಚಾರ ಕಾರ್ಯದಲ್ಲೂ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Last Updated : Oct 16, 2019, 3:04 PM IST

ABOUT THE AUTHOR

...view details