ಬೆಂಗಳೂರು: ಕಾಂಗ್ರೆಸ್ಗೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ಖಡಕ್ ಪ್ರತಿಕ್ರಿಯೆ ನೀಡಿರುವ ಅವರು, ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಿಗೆ ಕೂಡಾ ಎಂದು ಹೇಳಿದ್ದಾರೆ.