ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಅಮಾಯಕರು ಸಾವನ್ನಪ್ಪುವುದು ಹಾಗೂ ಬಲಿಯಾಗುವುದು ಸಾಮಾನ್ಯವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಗುಂಡೇಟಿಗೆ ಅಂದು ರೈತರು, ಇಂದು ಯುವಕರು ಬಲಿ: ಬಿಎಸ್ವೈ ವಿರುದ್ಧ ಸಿದ್ದರಾಮಯ್ಯ ಕಿಡಿ - ಸಿಎಂ ಬಿ.ಎಸ್. ಯಡಿಯೂರಪ್ಪ
ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಅಮಾಯಕರು ಸಾವನ್ನಪ್ಪುವುದು ಹಾಗೂ ಬಲಿಯಾಗುವುದು ಸಾಮಾನ್ಯವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೊದಲ ಬಾರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು. ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಮುಖಂಡರ ಭೇಟಿ
ಇಂದು ತಮ್ಮ ನಿವಾಸ ಕಾವೇರಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯರನ್ನು ಎಐಸಿಸಿ ವೀಕ್ಷಕರಾದ ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣದಾಸ್ ಭೇಟಿಯಾಗಿ ಸಮಾಲೋಚಿಸಿದ್ದರು. ಇದಾದ ಬಳಿಕ ಸಂಜೆ ಸಚಿವರಾದ ಮಾಧುಸ್ವಾಮಿ ಹಾಗೂ ಮಾಜಿ ಸಚಿವರಾದ ಮನಗೂಳಿ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.