ಬೆಂಗಳೂರು :ರಾಜ್ಯದ ಕೋವಿಡ್ ಆರ್ಭಟ ಹಿನ್ನೆಲೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಸಂಸದರು ಮತ್ತು ಶಾಸಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು.
ಸಂಕಷ್ಟದ ಸಮಯದಲ್ಲಿ ಕ್ಷೇತ್ರದ ಜನರ ಜತೆ ಇರುವಂತೆ ಸಿದ್ದರಾಮಯ್ಯ ಸೂಚನೆ ಕ್ಷೇತ್ರಗಳಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ.
ಕೋವಿಡ್ ಎರಡನೇ ಅಲೆ ಬರುತ್ತೆ ಎಂದು ತಜ್ಞರು ವರದಿ ಕೊಟ್ರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಸರ್ಕಾರದ ವೈಫಲ್ಯಗಳನ್ನ ಜನರಿಗೆ ತೋರಿಸುವುದರ ಜತೆಗೆ ಸಂಕಷ್ಟದ ಸಮಯದಲ್ಲಿ ಕ್ಷೇತ್ರದ ಜನರ ಜತೆ ಇರುವಂತೆ ಸೂಚನೆ ನೀಡಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಎಸ್.ಆರ್. ಪಾಟೀಲ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.