ಕರ್ನಾಟಕ

karnataka

By

Published : Nov 13, 2020, 7:57 PM IST

ETV Bharat / state

ಸಿಎಂನ ಭೇಟಿಯಾದ ಮಾಜಿ ಸಿಎಂ.. ಕುತೂಹಲ ಮೂಡಿಸಿದ ಬಿಎಸ್​ವೈ ಹೆಚ್‌ಡಿಕೆ ಭೇಟಿ..

ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ನಿಲುವು ತಳೆದಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉಪ ಚುನಾವಣೆಯಲ್ಲೂ ಜೆಡಿಎಸ್ ಸ್ಪರ್ಧೆ ಬಿಜೆಪಿಗೆ ಅನುಕೂಲವಾಯಿತು ಎನ್ನುವ ಮಾತುಗಳು ಹರಿದಾಡುತ್ತಿವೆ..

ಸಿಎಂ
ಸಿಎಂ

ಬೆಂಗಳೂರು :ಉಪ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆಯಲ್ಲಿ ಗೆಲುವು ತಂದು ಕೊಟ್ಟಿರಬಹುದು ಎಂದು ವ್ಯಾಖ್ಯಾನ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಇಂದು ದಿಢೀರ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಸಂಜೆ ಭೇಟಿ ನೀಡಿದ ಹೆಚ್​ಡಿಕೆ, ಸಿಎಂ ಬಿಎಸ್​ವೈ ಅವರನ್ನು ಭೇಟಿಯಾದರು. 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಹಿಂದಿನ ಮೈತ್ರಿ ಸರ್ಕಾರದ ಯೋಜನೆಗಳ ಬಗ್ಗೆ, ಉಪ ಚುನಾವಣಾ ಫಲಿತಾಂಶ ಹಾಗೂ ಪ್ರಸ್ತುತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಲಾಗಿದೆ ಎನ್ನಲಾಗುತ್ತಿದೆ.

ಹೆಚ್​ಡಿಕೆ-ಬಿಎಸ್​ವೈ ಭೇಟಿ

ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ನಿಲುವು ತಳೆದಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉಪ ಚುನಾವಣೆಯಲ್ಲೂ ಜೆಡಿಎಸ್ ಸ್ಪರ್ಧೆ ಬಿಜೆಪಿಗೆ ಅನುಕೂಲವಾಯಿತು ಎನ್ನುವ ಮಾತುಗಳು ಹರಿದಾಡುತ್ತಿವೆ. ಅದರ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಕುಮಾರಸ್ವಾಮಿ ಭೇಟಿ ನೀಡಿರುವುದು ಕುತೂಹಲ ಕೆರಳುವಂತೆ ಮಾಡಿದೆ.

ABOUT THE AUTHOR

...view details