ಕರ್ನಾಟಕ

karnataka

ETV Bharat / state

ಸೋಮಣ್ಣ ವಿಚಾರದಲ್ಲಿ ಗೊಂದಲವಿಲ್ಲ, ಯಾರನ್ನೂ ಕಡೆಗಣಿಸುವ ಪ್ರಶ್ನೆ ಇಲ್ಲ: ಯಡಿಯೂರಪ್ಪ

ಸೋಮಣ್ಣ ವಿಚಾರದಲ್ಲಿ ಗೊಂದಲ ಇಲ್ಲ- ಟಿಕೆಟ್​ ಹಂಚಿಕೆ ವೇಳೆ ಎಲ್ಲರ ಹೆಸರು ಚರ್ಚಿಸಲಾಗುವುದು - ಯಾರನ್ನೂ ಕಡೆಗಣಿಸುವ ಪ್ರಶ್ನೆ ಇಲ್ಲ ಎಂದ ಯಡಿಯೂರಪ್ಪ

former-cm-yadiyurappa-spoke-about-v-somanna
ಸೋಮಣ್ಣ ವಿಚಾರದಲ್ಲಿ ಗೊಂದಲವಿಲ್ಲ,ಯಾರನ್ನೂ ಕಡೆಗಣಿಸುವ ಪ್ರಶ್ನೆ ಇಲ್ಲ: ಯಡಿಯೂರಪ್ಪ

By

Published : Mar 16, 2023, 1:04 PM IST

ಬೆಂಗಳೂರು :ವಸತಿ ಸಚಿವ ವಿ. ಸೋಮಣ್ಣ ಅವರ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಇಲ್ಲಿ ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಎಲ್ಲರೂ ಅವರವರ ಕೆಲಸ ಮಾಡುತ್ತಿದ್ದು, ಟಿಕೆಟ್ ಹಂಚಿಕೆ ವೇಳೆ ಎಲ್ಲರ ಹೆಸರುಗಳನ್ನು ಚರ್ಚಿಸಲಾಗುತ್ತದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೂ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸೋಮಣ್ಣ ಅಸಮಾಧಾನ ವಿಚಾರ ಕುರಿತು ದೆಹಲಿಯಲ್ಲಿ ಹೈಕಮಾಂಡ್​ ಅವರನ್ನು ಕರೆಸಿ ಮಾತನಾಡಿದ್ದಾರೆ. ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ. ನಾವು ಅವರನ್ನು ಭೇಟಿಯಾಗಿಯೇ ಮೂರು ತಿಂಗಳು ಆಗಿದೆ. ಆದರೆ ಯಾರನ್ನೂ ಕಡೆಗಣಿಸಿಲ್ಲ ಎಂದು ಹೇಳಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಕೆಲಸ ಮಾಡುತ್ತಿದ್ದಾರೆ. ಸೋಮಣ್ಣ ಕೂಡ ಕೆಲಸ ಮಾಡುತ್ತಿದ್ದಾರೆ. ಟಿಕೆಟ್ ವಿಚಾರದಲ್ಲಿ ಎಲ್ಲವೂ ಚರ್ಚೆ ಆಗುತ್ತದೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಸೋಮಣ್ಣ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಇಲ್ಲಿ ಯಾರು ಯಾರನ್ನೂ ಕಡೆಗಣಿಸುವ ಪ್ರಶ್ನೆ ಇಲ್ಲ. ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಬೇರೆ ವಿಚಾರಕ್ಕೆ ನಾನು ತಲೆಕೆಡಿಸಿಕೊಂಡಿಲ್ಲ. ಗೆಲ್ಲುವಂತ ಅವಕಾಶ ಜಾಸ್ತಿ ಇರುವುದರಿಂದ ಅಭ್ಯರ್ಥಿಗಳ ಸಂಖ್ಯೆ ಜಾಸ್ತಿ ಇದೆ. ಹೀಗಾಗಿ ಟಿಕೆಟ್ ಬಗ್ಗೆ ಚರ್ಚೆ ಆಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸ್ಪಷ್ಟೀಕರಣ ನೀಡಿದರು.

ಸೋಮಣ್ಣ ಸಿಟ್ಟು ಶಮನ? : ಇನ್ನು ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ವಸತಿ ಸಚಿವ ವಿ. ಸೋಮಣ್ಣ ಅವರ ಸಿಟ್ಟನ್ನು ಪಕ್ಷದ ಹೈಕಮಾಂಡ್ ಶಮನ ಮಾಡುವಲ್ಲಿ ಸಫಲವಾಗಿದೆ. ಕಳೆದ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದ ಸೋಮಣ್ಣ ರಾಜ್ಯ ರಾಜಕೀಯ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ. ಪಕ್ಷದಲ್ಲಿನ ವಿಚಾರಗಳ ಕುರಿತು ಪ್ರಸ್ತಾಪಿಸಿ ಇತ್ತೀಚಿನ ದಿನಗಳಲ್ಲಿ ತಮಗಾದ ಅಸಮಾಧಾನಗಳ ಕುರಿತು ವಿವರಣೆ ನೀಡಿದ್ದಾರೆ. ಸೋಮಣ್ಣ ಅವರಿಂದ ಮಾಹಿತಿ ಪಡೆದ ಅಮಿತ್ ಶಾ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಎಲ್ಲವನ್ನೂ ನಾವು ಪರಿಹರಿಸುತ್ತೇವೆ ಎಂದು ಸಮಾಧಾನಪಡಿಸಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್ ಶಾ ಭೇಟಿ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನೂ ಭೇಟಿಯಾಗಿ ಸೋಮಣ್ಣ ಕೆಲಕಾಲ ಮಾತುಕತೆ ನಡೆಸಿದ್ದಾರೆ. ನಂತರ ಬೆಂಗಳೂರಿಗೆ ವಾಪಸಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ, ಬಂದ ಕೆಲಸ ಆಯಿತು ಎಂದು ಖುಷಿಯಿಂದ ಹೇಳಿಕೊಂಡಿದ್ದನ್ನು ನೋಡಿದರೆ ಸೋಮಣ್ಣ ಅಸಮಾಧಾನಕ್ಕೆ ಹೈಕಮಾಂಡ್ ಪರಿಹಾರ ಸೂಚಿಸಿದೆ ಎನ್ನಲಾಗಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಉಸ್ತುವಾರಿ :ಹಳೇ ಮೈಸೂರು ಪ್ರಾಂತ್ಯದಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ ಬಿಜೆಪಿಯ ಯಾವುದೇ ತಂತ್ರಗಳು ಇಲ್ಲಿ ಫಲಪ್ರದವಾಗಿಲ್ಲ. ಈ ಹಿನ್ನೆಲೆ ಇಲ್ಲಿನ ಅನುಭವ ಇರುವ ವಿ. ಸೋಮಣ್ಣ ಅವರಿಗೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಅದರಲ್ಲೂ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಸ್ತುವಾರಿ ನೀಡಲು ಹೈಕಮಾಂಡ್ ಒಲವು ತೋರಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ :ವಿ.ಸೋಮಣ್ಣರ ಮುನಿಸಿಗೆ ಮುಲಾಮು: ಚಾಮರಾಜನಗರ ಸಾರಥ್ಯ ಕೊಟ್ಟ ಬಿಜೆಪಿ ಹೈಕಮಾಂಡ್

ABOUT THE AUTHOR

...view details