ಬೆಂಗಳೂರು :ನಿನ್ನೆ ಶಿಕಾರಿಪುರ ಜನ ಒತ್ತಾಯ ಮಾಡಿದ ಕಾರಣ ನಾನು ಹಾಗೆ ಹೇಳಿದ್ದೇನೆ. ಆದರೆ, ಅಂತಿಮ ತಿರ್ಮಾನವನ್ನು ಮೋದಿ, ಅಮಿತ್ ಶಾ, ನಡ್ಡಾ ಅವರು ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಕಾವೇರಿ ನಿವಾಸದ ಬಳಿ ಮಾತನಾಡಿದ ಅವರು, ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿದೆ.
ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ. ನಿನ್ನೆ ನನಗೆ ಶಿಕಾರಿಪುರದ ಜನ ಚುನಾವಣೆ ನಿಲ್ಲಲು ಒತ್ತಾಯ ಮಾಡಿದ್ರು. ಆದರೆ ನಾನು ನಿಲ್ಲೋದಿಲ್ಲಪ್ಪಾ ವಿಜಯೇಂದ್ರ ನಿಲ್ತಾರೆ ಎಂದು ಹೇಳಿದ್ದೆ. ಆದರೆ, ಈ ಬಗ್ಗೆ ಪಕ್ಷದ ತೀರ್ಮಾನವೇ ಅಂತಿಮ. ನನ್ನ ಸಲಹೆ ಅಷ್ಟೇ ಎಂದು ಹೇಳಿದರು.
ವಿಜಯೇಂದ್ರ ಎಲ್ಲೇ ನಿಂತರೂ ಗೆಲ್ಲುವ ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರೂ ಅವರು ಗೆಲ್ಲುತ್ತಾರೆ. ಆದರೆ, ಈ ಬಗ್ಗೆ ಅಂತಿಮವಾಗಿ ತೀರ್ಮಾನ ಮಾಡೋದು ಪ್ರಧಾನಿ ಮೋದಿ ಎಂದು ತಿಳಿಸಿದರು. ನನಗೆ ಪಕ್ಷದಲ್ಲಿ ಸಾಕ್ಕಷ್ಟು ಅವಕಾಶ ಸಿಕ್ಕಿದೆ. ರಾಷ್ಟ್ರ ಮಟ್ಟದಲ್ಲಿ ನನ್ನನ್ನು ಬೆಳೆಸಿದ್ದಾರೆ.