ಕರ್ನಾಟಕ

karnataka

ETV Bharat / state

ರೇಖಾ ಕದಿರೇಶ್ ಕೊಲೆ ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವುದಾಗಿ ಸಿಎಂ ಖಡಕ್​ ಮಾತು - 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದ ಸಿಎಂ

ಮಹಿಳಾ ಮಾಜಿ ಕಾರ್ಪೊರೇಟರ್​​ನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಸಿದ್ದಾರೆ. ಆರೋಪಿಗಳನ್ನು 24 ಗಂಟೆಗಳಲ್ಲೇ ಬಂಧಿಸುತ್ತೇವೆ ಎಂದು ಖಡಕ್​ ವಾರ್ನಿಂಗ್​ ನೀಡಿದ್ದಾರೆ.

Former corporator Rekha Kadiresh murder, Former corporator Rekha Kadiresh murder case, murder accused arrest within 24 hours says CM, ರೇಖಾ ಕದಿರೇಶ್ ಕೊಲೆ ಪ್ರಕರಣ, ರೇಖಾ ಕದಿರೇಶ್ ಕೊಲೆ ಪ್ರಕರಣ ಸುದ್ದಿ, ರೇಖಾ ಕದಿರೇಶ್ ಕೊಲೆ ಪ್ರಕರಣ ಅಪ್​ಡೇಟ್​, 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದ ಸಿಎಂ,
ರೇಖಾ ಕದಿರೇಶ್ ಕೊಲೆ ಪ್ರಕರಣ

By

Published : Jun 24, 2021, 1:22 PM IST

Updated : Jun 24, 2021, 1:31 PM IST

ಬೆಂಗಳೂರು:ರಾಜ್ಯ ಅನ್​ಲಾಕ್​ನತ್ತ ಸಾಗುತ್ತಿದ್ದು, ಸಿಎಂ ಯಡಿಯೂರಪ್ಪ ರೈಲಿನ ಮೂಲಕವೇ ದ್ವಿಪಥ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗೋಷ್ಟಿ ನಡೆಸುತ್ತಿದ್ದ ವೇಳೆ ಮಹಿಳಾ ಮಾಜಿ ಕಾರ್ಪೊರೇಟರ್​​ನ್ನು ಬರ್ಬರವಾಗಿ ಕೊಲೆ ಪ್ರಕರಣದ ಕುರಿತು ಖಡಕ್​ ಮಾತುಗಳನ್ನಾಡಿದ್ದಾರೆ.

24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದ ಸಿಎಂ ಯಡಿಯೂರಪ್ಪ

ಚಲವಾದಿ ಪಾಳ್ಯದ ಮಾಜಿ ಕಾರ್ಪೊರೇಟ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ನಗರ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಈ ಹಿಂದೆ ಅವರ ಪತಿಯನ್ನು ಇದೇ ರೀತಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈಗಲೂ ಅದೇ ರೀತಿ ಅವರ ಪತ್ನಿಯನ್ನು ಹತ್ಯೆ ಮಾಡಲಾಗಿದೆ. 24ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದರು.

ಚಲವಾದಿ ಪಾಳ್ಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅಂಜನಪ್ಪ ಗಾರ್ಡನ್​ ಬಳಿ ಬಡವರಿಗೆ ಫುಡ್​ ಕಿಟ್​ ವಿತರಿಸುತ್ತಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ರೇಖಾ ಅವರನ್ನು ಕೊಲೆ ಮಾಡುವ ಉದ್ದೇಶದಿಂದಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮಾಜಿ ಕಾರ್ಪೊರೇಟರ್​ ಕತ್ತು ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ನರಳಾಡಿದ್ದಾರೆ. ಸ್ಥಳೀಯರು ಈ ಮಾಹಿತಿಯನ್ನು ಪೊಲೀಸರಿಗೆ ರವಾನಿಸಿದ್ದಾರೆ. ಸುದ್ದಿ ತಿಳಿದಾಕ್ಷಣವೇ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ದೌಡಾಯಿಸಿ, ಗಂಭೀರವಾಗಿ ಗಾಯಗೊಂಡಿದ್ದ ರೇಖಾರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ರಕ್ತ ಸ್ರಾವದಿಂದ ರೇಖಾ ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Last Updated : Jun 24, 2021, 1:31 PM IST

ABOUT THE AUTHOR

...view details