ಬೆಂಗಳೂರು:ಮಾಜಿ ಡಿಸಿಎಂ ಜಿ.ಪರಮೇಶ್ವರ್ ಮನೆ, ಕಚೇರಿ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆ ಪರಮೇಶ್ವರ್ ವಿಚಾರಣೆಗೆ ಹಾಜರಾಗಿದ್ದಾರೆ.
ಐಟಿ ವಿಚಾರಣೆಗೆ ಹಾಜರಾದ ಮಾಜಿ ಡಿಸಿಎಂ ಪರಮೇಶ್ವರ್
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಸಮನ್ಸ್ ಜಾರಿ ಹಿನ್ನೆಲೆ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ಇಂದು ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಡಾ. ಜಿ.ಪರಮೇಶ್ವರ್ ಕ್ವೀನ್ಸ್ ರಸ್ತೆ ಬಳಿ ಇರುವ ಐಟಿ ಕಚೇರಿಗೆ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದಾರೆ. ಅ. 10ರಂದು ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಆಸ್ತಿ ಏರುಪೇರು ಕುರಿತಾದ ಮಾಹಿತಿ ಹಾಗೂ ಹಲವಾರು ದಾಖಲೆಗಳ ವಶಕ್ಕೆ ಪಡೆದಿದ್ರು.
ಹೀಗಾಗಿ ನಿನ್ನೆ ಪರಮೇಶ್ವರ್ ಆಪ್ತರನ್ನ ವಿಚಾರಣೆ ನಡೆಸಿ ಕೆಲ ಮಾಹಿತಿ ಪಡೆಯಲಾಗಿತ್ತು. ಇಂದು ಡಾ. ಜಿ.ಪರಮೇಶ್ವರ್ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಇಂದು 11 ಗಂಟೆ ಸುಮಾರಿಗೆ ಪರಮೇಶ್ವರ್ ಅವರು ದಾಖಲೆಗಳ ಸಮೇತ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ.