ಬೆಂಗಳೂರು: ಡಿಆರ್ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಇಂಜಿನಿಯರ್ ಹಾಗು ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಅವರು ನಿಧನರಾಗಿದ್ದು, ವಾರದ ಹಿಂದೆ ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ನಿಧನ - .ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ
ವಾರದ ಹಿಂದಷ್ಟೇ ಸುಧೀಂದ್ರ ಹಾಲ್ದೊಡ್ಡೇರಿ ಅವರು ಹೃದಯಾಘಾತದಿಂದ ಬಳಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸುಧೀಂದ್ರ ಅವರ ಮೆದುಳಿಗೆ ಆಮ್ಲಜನಕ ಪೂರೈಕೆ ಆಗುತ್ತಿರಲಿಲ್ಲ, ಪರಿಣಾಮ ಮೆದುಳು ನಿಷ್ಕ್ರಿಯಗೊಂಡಿತ್ತು ಎಂದು ವೈದ್ಯ ಮೂಲಗಳು ಮಾಹಿತಿ ನೀಡಿವೆ. ಸುಧೀಂದ್ರ ಹಾಲ್ದೊಡ್ಡೇರಿ ವಿಜ್ಞಾನ ಬರಹಗಳ ಮೂಲಕ ಜನರ ಮೆಚ್ಚುಗೆ ಪಡೆದಿದ್ದರು. ಕನ್ನಡದ ಹಲವು ಪತ್ರಿಕೆಗೆ ಅಂಕಣವನ್ನೂ ಸಹ ಬರೆಯುತ್ತಿದ್ದರು. ಹಾಗೆಯೇ 'ಕನ್ನಡದಲ್ಲಿ ವಿಜ್ಞಾನ ಸಂವಹನ ಸವಾಲುಗಳು' ಎಂಬುದರ ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಅವರ ಕೈಯಲ್ಲಿ ಕನ್ನಡದಲ್ಲೇ ವಿಜ್ಞಾನ ಕೌತುಕಗಳ ಬಗ್ಗೆ ಸಾಮಾನ್ಯರಿಗೂ ಅರ್ಥವಾಗುವಂತೆ ಬರಹ ಮೂಡಿ ಬರುತ್ತಿತ್ತು.
ಇದನ್ನೂ ಓದಿ:ಪಿಎ ಆಗಲಿ, ಯಾರೇ ಆಗಲಿ ತಪ್ಪು ಮಾಡಿದ್ರೆ ಕಾನೂನು ಕ್ರಮ ಆಗಲೇ ಬೇಕು: ಸಿದ್ದರಾಮಯ್ಯ