ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಮುಂದಾಗಬೇಕು: ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಪತ್ರ.. - ಹಿಜಾಬ್ ಸಮವಸ್ತ್ರದ ಬಗ್ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಭಿಪ್ರಾಯ

ಹಿಜಾಬ್ ಅಥವಾ ಸಮವಸ್ತ್ರ ಮತ್ತು ಅದರ ಸುತ್ತಲೂ ಭುಗಿಲೇಳುತ್ತಿರುವ ವಿವಾದ ಮೇಲ್ನೋಟದ್ದಲ್ಲ. ಅಲ್ಲಿನ ಆಂತರಿಕ ಸಂಘರ್ಷ ಅದನ್ನು ಹುಟ್ಟುಹಾಕುತ್ತಿರುವವರ ಮನೋಧರ್ಮ, ಮೂಲಭೂತ ಅವಶ್ಯಕತೆಗಳನ್ನು ಮೀರಿರುವುದು ಗಣನೀಯವೆಂದು ನೆನಪಿಸಿದ್ದಾರೆ.

former-education-minister-suresh-kumar-spoke-on-education-department
ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಪತ್ರ

By

Published : Feb 18, 2022, 8:30 PM IST

ಬೆಂಗಳೂರು:ಹಿಜಾಬ್ ಸಮವಸ್ತ್ರ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಸಚಿವ ಬಿ. ಸಿ ನಾಗೇಶ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ. ಸಿ ನಾಗೇಶ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಶಾಲೆ - ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಆರೋಪ - ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಸಚಿವ ಬಿ. ಸಿ ನಾಗೇಶ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್

ಹಿಜಾಬ್ ಅಥವಾ ಸಮವಸ್ತ್ರ ಮತ್ತು ಅದರ ಸುತ್ತಲೂ ಭುಗಿಲೇಳುತ್ತಿರುವ ವಿವಾದ ಮೇಲ್ನೋಟದ್ದಲ್ಲ. ಅಲ್ಲಿನ ಆಂತರಿಕ ಸಂಘರ್ಷ, ಅದನ್ನು ಹುಟ್ಟುಹಾಕುತ್ತಿರುವವರ ಮನೋಧರ್ಮ, ಮೂಲಭೂತ ಅವಶ್ಯಕತೆಗಳನ್ನು ಮೀರಿರುವುದು ಗಣನೀಯವೆಂದು ನೆನಪಿಸಿದ್ದಾರೆ.

ಶಿಕ್ಷಣ ಸಚಿವ ಬಿ. ಸಿ ನಾಗೇಶ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್

ಶಿಕ್ಷಣ ಇಲಾಖೆ ಕೂಡಲೇ ಕಠಿಣ ಕ್ರಮಗಳಿಗೆ ಮುಂದಾಗಬೇಕು: ಘನ ನ್ಯಾಯಾಲಯವು ಸಾಂವಿಧಾನಿಕ ಅವಕಾಶಗಳನ್ನು ಅವಲೋಕಿಸುತ್ತಿರುವಾಗಲೂ ಶಾಂತಿ ಕದಡುವ ಪ್ರಯತ್ನಗಳಾಗುತ್ತಿರುವುದು ಇದರ ಹಿಂದಿನ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಶಿಕ್ಷಣ ಇಲಾಖೆ ಕೂಡಲೇ ಕೆಲವು ಕಠಿಣ ಕ್ರಮಗಳಿಗೆ ಮುಂದಾಗಬೇಕೆಂದು ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ಶಿಕ್ಷಣ ಸಚಿವ ಬಿ. ಸಿ ನಾಗೇಶ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್

ಓದಿ:ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆ ಘೋಷಣೆ : ಸಚಿವ ಆಚಾರ್ ಹಾಲಪ್ಪ

For All Latest Updates

TAGGED:

ABOUT THE AUTHOR

...view details