ಕರ್ನಾಟಕ

karnataka

ETV Bharat / state

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್​ಗೆ ಲಘು ಹೃದಯಾಘಾತ: ಶ್ರೀಲಂಕಾದಿಂದ ಬೆಂಗಳೂರಿಗೆ ಶಿಫ್ಟ್​ - ನಾರಾಯಣ ಹೃದಯಾಲಯ ಆಸ್ಪತ್ರೆ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್​ ಅವರಿಗೆ ಲಘು ಹೃದಯಾಘಾತ ಆಗಿದ್ದು, ಶ್ರೀಲಂಕಾದಿಂದ ಬೆಂಗಳೂರಿಗೆ ಕರೆತರಲಾಗಿದೆ.

former-isro-chairman-kasturirangan-suffered-a-mild-heart-attack-in-sri-lanka
ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್​ಗೆ ಲಘು ಹೃದಯಾಘಾತ: ಶ್ರೀಲಂಕಾದಿಂದ ಬೆಂಗಳೂರಿಗೆ ಶಿಫ್ಟ್​

By

Published : Jul 10, 2023, 6:46 PM IST

Updated : Jul 11, 2023, 9:48 AM IST

ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಶಿಫ್ಟ್

ಬೆಂಗಳೂರು:ಇಸ್ರೋ ಮಾಜಿ ಅಧ್ಯಕ್ಷ ಡಾ ಕೆ ಕಸ್ತೂರಿರಂಗನ್ ಅವರಿಗೆ ಲಘು ಹೃದಯಾಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆತರಲಾಗಿದೆ. ಶ್ರೀಲಂಕಾದಿಂದ ಬೆಂಗಳೂರಿಗೆ ವಿಮಾನದ ಮೂಲಕ ಬಂದ ಬಳಿಕ ಜೀರೋ ಟ್ರಾಫಿಕ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್:ಕಸ್ತೂರಿರಂಗನ್ ಅವರು ತೀವ್ರ ಅಸ್ವಸ್ಥರಾಗಿದ್ದು, ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿದೆ.

ಹೆಲ್ತ್ ಬುಲೆಟಿನ್

ಶ್ರೀಲಂಕಾದ ಕೊಲಂಬೊಗೆ ತೆರಳಿದ್ದ ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿಶೇಷ ವಿಮಾನದ ಮೂಲಕ ಅವರನ್ನು ಬೆಂಗಳೂರಿಗೆ ಬಂದಿದ್ದು, ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯಲಿದೆ. ಹೃದಯಾಘಾತದ ಹಿನ್ನೆಲೆಯಲ್ಲಿ ಇಂದು ಸಂಜೆ 5.30ಕ್ಕೆ ಕೊಲಂಬೊದಿಂದ ಹೆಚ್​ಎಎಲ್ ನಿಲ್ದಾಣಕ್ಕೆ ವಿಮಾನಕ್ಕೆ ಬರಬೇಕಿತ್ತು. ಆದರೆ, ಕೆಲ ಕಾರಣಗಳಿಂದ ತಡವಾಗಿ ವಿಮಾನ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್​ಎಎಲ್​ಗೆ ಬಂದ ಬಳಿಕ ಅಲ್ಲಿಂದ ನೇರವಾಗಿ ಹಾಗೂ ತುರ್ತಾಗಿ ತಲುಪಲು ಸಂಚಾರ ಪೊಲೀಸರು ಗ್ರೀನ್ ಕಾರಿಡಾರ್ ಮಾಡುವ ಮೂಲಕ ಕ್ರಮ ಕೈಗೊಂಡಿದ್ದರು. ಖ್ಯಾತ ವೈದ್ಯ ಡಾ. ದೇವಿಶೆಟ್ಟಿ ಅವರು ಕಸ್ತೂರಿರಂಗನ್ ಅವರಿಗೆ ಚಿಕಿತ್ಸೆ ನೀಡಲಿದ್ದಾರೆ. ಕಸ್ತೂರಿ ರಂಗನ್ ಅವರಿಗೆ 83 ವರ್ಷ ವಯಸ್ಸಾಗಿದ್ದು, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​: ''ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಶ್ರೀ ಕಸ್ತೂರಿ ರಂಗನ್ ಅವರು ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬೇಸರವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯಯುತ ಜೀವನ ನಡೆಸಲಿ ಎಂದು ಹಾರೈಸುತ್ತೇನೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

Last Updated : Jul 11, 2023, 9:48 AM IST

ABOUT THE AUTHOR

...view details