ಬೆಂಗಳೂರು:ಒಂದೇ ಪಕ್ಷದಲ್ಲಿ ಇದ್ದುಕೊಂಡು ಬಹಳ ಆತ್ಮೀಯರಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ವಾರ ಕಾಲ ಜೈಲಿನ ಆಸ್ಪತ್ರೆಯ ಬ್ಯಾರಕ್ನಲ್ಲಿ ಜೊತೆಗಿದ್ರು. ಇದೀಗ ಬೇಗ್ಗೆ ಬೇಲು ಸಿಕ್ಕಿದ್ದರಿಂದ ಅವರು ಜೈಲಿನಿಂದ ಹೊರಗಡೆ ಬಂದಿದ್ದಾರೆ.
ರೋಷನ್ ಬೇಗ್ ಐಎಂಎ ಪ್ರಕರಣದಲ್ಲಿ ಜೈಲು ಸೇರಿದ್ರೆ, ಮಾಜಿ ಮೇಯರ್ ಸಂಪತ್ ರಾಜ್ ಅವರು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಹೀಗಾಗಿ ಪ್ರಕರಣ ಗಂಭೀರತೆಯಿಂದ ಕೂಡಿದ ಕಾರಣ ಎನ್ಐಎ ಕೂಡ ತನಿಖೆ ನಡೆಸುತ್ತಿದೆ. ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರೂ ಕೂಡ ಸದ್ಯ ಜಾಮೀನು ಸಿಕ್ಕಿಲ್ಲ. ಆದರೆ ರೋಷನ್ ಬೇಗ್ ಸಂಪತ್ ರಾಜ್ ಬಳಿಕ ಜೈಲಿಗೆ ಸೇರಿದರೂ ಕೂಡ ಅವರಿಗೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಸಿಕ್ಕಿದೆ.