ಬೆಂಗಳೂರು : ನಾಲ್ಕು ದಿನಗಳ ಸುದೀರ್ಘ ವಿಚಾರಣೆ ನಂತರ ರಾತ್ರಿ ತಮ್ಮನ್ನು ಬಂಧಿಸಿದ್ದಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಬಿಜೆಪಿಯನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.
ಇಡಿಯಿಂದ ಬಂಧನ: ಬಿಜೆಪಿ ಸ್ನೇಹಿತರಿಗೇ ಅಭಿನಂದಿಸಿ ಡಿಕೆಶಿ ಟ್ವೀಟ್! - ಡಿಕೆಶಿ ಟ್ವೀಟ್
ನಾಲ್ಕು ದಿನಗಳ ಸುದೀರ್ಘ ವಿಚಾರಣೆ ನಂತರ ರಾತ್ರಿ ತಮ್ಮನ್ನು ಬಂಧಿಸಿದ್ದಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಬಿಜೆಪಿಯನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.
ಡಿಕೆ ಶಿವಕುಮಾರ್
ತಮ್ಮ ಬಂಧನದ ಮೂಲಕ ಬಿಜೆಪಿಯ ಕಾರ್ಯಾಚರಣೆ ಯಶಸ್ವಿಯಾದಂತಾಗಿದೆ. ಆದಾಯ ತೆರಿಗೆ ಮತ್ತು ಅಧಿಕಾರಿಗಳು ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಟ್ವೀಟ್ನಲ್ಲಿ ಡಿಕೆ ಶಿವಕುಮಾರ್ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.
ಬಿಜೆಪಿಯ ದ್ವೇಷದ ರಾಜಕೀಯಕ್ಕೆ ತಮ್ಮನ್ನು ಬಳಸಿಕೊಳ್ಳಲಾಗಿದೆ ಎಂದು ಟ್ವೀಟ್ನಲ್ಲಿ ಬಿಜೆಪಿ ಕ್ರಮವನ್ನು ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.