ಬೆಂಗಳೂರು:ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಿಡಿ ಪ್ರಕರಣ ಸಂಬಂಧ ಎಸ್ಐಟಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಸಂಬಂಧ ಇಂದು ರಮೇಶ್ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಸಿಡಿ ಪ್ರಕರಣ:ಮಾಜಿ ಶಾಸಕ ನಾಗರಾಜ್, ವಕೀಲರ ಜೊತೆ ವಿಚಾರಣೆಗೆ ಆಗಮಿಸಿದ ಜಾರಕಿಹೊಳಿ - Former minister Ramesh Jarakiholi arrived at hearing
10:08 March 29
ಸಿಡಿ ಪ್ರಕರಣ ಸಂಬಂಧ ವಿಚಾರಣೆ ರಮೇಶ್ ಜಾರಕಿಹೊಳಿ ಹಾಜರು
ಮಾಜಿ ಶಾಸಕ ನಾಗರಾಜ್ ಜೊತೆ ಕಾರಿನಲ್ಲಿ ರಮೇಶ್ ಜಾರಕಿಹೊಳಿ ಆಡುಗೋಡಿಯಲ್ಲಿರುವ ಟೆಕ್ನಿಕಲ್ ಸೆಂಟರ್ಗೆ ಆಗಮಿಸಿ ತನಿಖಾಧಿಕಾರಿಗಳ ಮುಂದೆ ವಿಚಾರಣೆ ಎದುರಿಸಿದ್ದಾರೆ.
ನನ್ನ ವಿರುದ್ಧ ಗ್ಯಾಂಗ್ ನಕಲಿ ಸಿಡಿ ಸೃಷ್ಟಿಸಿ ಷಡ್ಯಂತ್ರ ರೂಪಿಸಿದೆ. ಈ ಮೂಲಕ ನನ್ನ ರಾಜಕೀಯ ಜೀವನ ಹಾಳು ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಸದಾಶಿವನಗರ ಪೊಲೀಸ್ ಠಾಣೆಗೆ ರಮೇಶ್ ಜಾರಕಿಹೊಳಿ ದೂರು ನೀಡಿದ್ದರು.
ಓದಿ: ಸಿಡಿ ಪ್ರಕರಣ ಕುರಿತು ನನಗೆ ಏನೂ ಕೇಳಬೇಡಿ : ಡಿ.ಕೆ. ಶಿವಕುಮಾರ್
ಇನ್ನೊಂದೆಡೆ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆಪಾದಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಯುವತಿ ವಕೀಲರ ಮೂಲಕ ದೂರು ನೀಡಿದ್ದಳು. ದೂರು-ಪ್ರತಿದೂರು ನೀಡಿದ್ದ ಸಂಬಂಧ ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರ ಅನ್ವಯ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿದ್ದಾರೆ.