ದೇವನಹಳ್ಳಿ(ಬೆಂಗಳೂರು):2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರ ಸಾಮಾನ್ಯ. ಅಂತೆಯೇ, ಬಹುದಿನಗಳಿಂದ ಚರ್ಚೆಯಲ್ಲಿರುವ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ ಬಿಜೆಪಿ ಸೇರ್ಪಡೆ ಬಹುತೇಕ ಖಚಿತವೆಂದೇ ಹೇಳಲಾಗುತ್ತಿದೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಬಿಜೆಪಿ ಸೇರ್ಪಡೆ ಎಂಬ ವದಂತಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಸಾಕ್ಷಿ ಎನ್ನುವಂತೆ ಭಾನುವಾರ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆಯಲ್ಲಿ ನಡೆದ ಸರ್ಕಾರಿ ಶಾಲಾ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಪಿಳ್ಳಮುನಿಶಾಮಪ್ಪ ಕಾಣಿಸಿಕೊಂಡರು. ಅಷ್ಟೇ ಅಲ್ಲದೆ, ಸಚಿವರೊಂದಿಗೆ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಾತುಕತೆ ನಡೆಸಿದರು.