ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಉರಿಮಜಲು ರಾಮಭಟ್ (92) ಇಂದು ನಿಧನರಾಗಿದ್ದಾರೆ. ಪುತ್ತೂರಿನ ಮಾಜಿ ಶಾಸಕರಾಗಿದ್ದ ಅವರು, ವಯೋಸಹಜ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಬಳಿಕ ಆಸ್ಪತ್ರೆಯಿಂದ ಅವರನ್ನು ಮನೆಗೆ ಕರೆತರಲಾಗಿತ್ತು. ಇಂದು ಅವರು ವಿಧಿವಶರಾಗಿದ್ದಾರೆ.
ಉರಿಮಜಲು ರಾಮ್ ಭಟ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
ಜನಸಂಘ ಮೂಲದ ನಾಯಕರಾದ ಹಾಗೂ ಮಾಜಿ ಶಾಸಕ ಉರಿಮಜಲು ರಾಮ ಭಟ್ ಅವರು ವಿದಿವಶರಾದ ಸುದ್ದಿ ತಿಳಿದು ನನಗೆ ಅತೀವ ದುಃಖವಾಗಿದೆ ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ತಮ್ಮ ಸರ್ವಸ್ವವನ್ನು ಧಾರೆಯರೆದ ಅವರ ಜೀವನ ಅನುಕರಣೀಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.